ನವದೆಹಲಿ,ಡಿಸೆಂಬರ್,13,2022(www.justkannada.in): ಗಡಿಯಲ್ಲಿ ಭಾರತ-ಚೀನಾ ಯೋಧರ ನಡುವೆ ಘರ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತುರ್ತು ಸಭೆ ಕರೆದಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ತುರ್ತು ಸಭೆ ನಡೆಯಲಿದ್ದು, ವಿದೇಶಾಂಗ ಸಚಿವ ಜೈಶಂಕರ್ , ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವೆಲ್, 3 ಸೇನಾಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ ಪಾಲ್ಗೊಳ್ಳಲಿದ್ದಾರೆ. ರಾಜನಾಥ್ ಸಿಂಗ್ ಅವರು ಘರ್ಷಣೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಭಾರತ-ಚೀನಾ ಘರ್ಷಣೆ ವಿಚಾರ ಸಂಸತ್ ನಲ್ಲೂ ಪ್ರತಿಧ್ವನಿಸಲಿದ್ದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಚಾರ ಪ್ರಸ್ತಾಪಿಸಲು ವಿಪಕ್ಷಗಳು ಸಜ್ಜಾಗಿವೆ.
ಅರುಣಾಚಲ ಪ್ರದೇಶದ ತವಾಂಗ್ ನಲ್ಲಿ ಡಿಸೆಂಬರ್ 9ರಂದು ಚೀನಾ ಹಾಗೂ ಭಾರತೀಯ ಸೇನಾ ಯೋಧರ ನಡುವೆ ಸಂಘರ್ಷ ನಡೆದಿತ್ತು. ಘರ್ಷಣೆಯಲ್ಲಿ ಭಾರತ ಹಾಗೂ ಚೀನಾ ದೇಶದ ಯೋಧರು ಗಾಯಗೊಂಡಿದ್ದಾರೆ
Key words: India-China- conflict – Union Defense Minister -Rajnath Singh – emergency -meeting.