ಬೆಂಗಳೂರು,ಆಗಸ್ಟ್,23,2023(www.justkannada.in): ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಇತಿಹಾಸ ಸೃಷ್ಠಿಸಿದ್ದು, ಚಂದ್ರನ ಅಂಗಳದಲ್ಲಿ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದೆ.
ಈ ಮೂಲಕ ಇಸ್ರೋ ದಶಕಗಳ ಕನಸು ನನಸಾಗಿದ್ದು, ದಕ್ಷಿಣ ಧ್ರುವದಲ್ಲಿ ಕಾಲಿಟ್ಟ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಆಗಿದೆ. ಈ ಮೂಲಕ ಇಸ್ರೋ ವಿಜ್ಞಾನಿಗಳು ಇತಿಹಾಸ ಸೃಷ್ಠಿಸಿದ್ದಾರೆ. ಚಂದ್ರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಸುಸೂತ್ರವಾಗಿ ಇಳಿದ ಹಿನ್ನೆಲೆ ಇಸ್ರೋ ವಿಜ್ಞಾನಿಗಳು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.
Key words: India – created- history -Vikram lander-soft land – moon