ಬೆಂಗಳೂರು, ನವೆಂಬರ್ 16, 2021 (www.justkannada.in): ಟಿ-20 ವಿಶ್ವಕಪ್ ಮುಗಿದು ಮೂರೇ ದಿನಕ್ಕೆ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮತ್ತೆ ಮುಖಾಮುಖಿಯಾಗುತ್ತಿವೆ.
ನ.17ರಂದು ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಭಾರತ- ನ್ಯೂಜಿಲ್ಯಾಂಡ್ ನಡುವಿನ ಮೊದಲ ಟಿ20 ಪಂದ್ಯ ನಡೆಯಲಿದೆ. ಕೇನ್ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಹಿರಿಯ ವೇಗಿ ಟಿಮ್ ಸೌಥಿ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ.
ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಅವರು ಈ ಟಿ20 ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಸತತ ಕ್ರಿಕೆಟ್ ಮತ್ತು ಮುಂದಿನ ಟೆಸ್ಟ್ ಸರಣಿಗೆ ತಯಾರಾಗುವ ಉದ್ದೇಶದಿಂದ ಕೇನ್ ವಿಲಿಯಮ್ಸನ್ ಈ ನಿರ್ಧಾರ ಕೈಗೊಂಡಿದ್ದಾರೆ.
ಎರಡನೇ ಟಿ20 ಪಂದ್ಯ ರಾಂಚಿಯಲ್ಲಿ ನವೆಂಬರ್ 19 ರಂದು ನಡೆಯಲಿದ್ದು, ಅಂತಿಮ ಪಂದ್ಯ ನವೆಂಬರ್ 21 ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ. ಎರಡು ಟೆಸ್ಟ್ ಪಂದ್ಯಗಳು ಕ್ರಮವಾಗಿ ನವೆಂಬರ್ 25-29 ಮತ್ತು ಡಿಸೆಂಬರ್ 3-7 ರವರೆಗೆ ಕಾನ್ಪುರ ಮತ್ತು ಮುಂಬೈನಲ್ಲಿ ನಡೆಯಲಿವೆ.