ಲಷ್ಕರ್​ ಸಂಘಟನೆಯ ಟಾಪ್ ಕಮಾಂಡರ್ ಹತ್ಯೆಗೈದ ಭಾರತೀಯ ಸೇನೆ

ಬಂಡಿಪೋರಾ, ಏಪ್ರಿಲ್ 25,2025 (www.justkannada.in): ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಬೆನ್ನಲ್ಲೆ ಇದೀಗ ಉಗ್ರರ ವಿರುದ್ದ ಕಾರ್ಯಾಚರಣೆ ತೀವ್ರಗೊಳಿಸಿರುವ ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಲಷ್ಕರ್​ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನ ಹೊಡೆದುರುಳಿಸಿದೆ.

ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಸಾವನ್ನಪ್ಪಿದ್ದಾನೆ.

ಏಪ್ರಿಲ್ 22 ರಂದು  ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್​-ಎ-ತೊಯ್ಬಾ ಹೊತ್ತುಕೊಂಡಿತ್ತು. ಇದೀಗ ಭಾರತೀಯ ಸೇನೆ  ಲಷ್ಕರ್​-ಎ-ತೊಯ್ಬಾದ ಟಾಪ್​ ಕಮಾಂಡರ್​ ಅಲ್ತಾಫ್​ನನ್ನು ಹತ್ಯೆ ಮಾಡಿದೆ.

ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಪಹಲ್ಗಾಮ್​ನಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಪ್ರವಾಸಿಗರಲ್ಲಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಘಟನೆಯಲ್ಲಿ 26 ಮಂದಿ ಮೃತಪಟ್ಟಿದ್ದರು.

Key words: Indian Army, kills, top, Lashkar commander