ಹರಿಯಾಣ,ಜು, 29,2020(www.justkannada.in): ಭಾರತೀಯ ಸೇನೆಗೆ ಇದೀಗ ಆನೆ ಬಲ ಬಂದಂತಾಗಿದ್ದು ಫ್ರಾನ್ಸ್‌ನಿಂದ ಹೊರಟಿದ್ದ ಮೊದಲ ಹಂತದ ಐದು ರಫೇಲ್ ಯುದ್ಧ ವಿಮಾನಗಳು ಇಂದು ಮಧ್ಯಾಹ್ನ ಅಂಬಾಲ ವಾಯುನೆಲೆಗೆ ಬಂದು ಇಳಿದಿವೆ.
ಅಂಬಾಲ ಏರ್ ಬೇಸ್ ಗೆ ಆಗಮಿಸಿದ ರಫೆಲ್ ಯುದ್ಧ ವಿಮಾನಗಳನ್ನ ಭಾರತೀಯ ವಾಯುಪಡೆಯ ಮುಖ್ಯಸ್ಥರಾದ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಬರಮಾಡಿಕೊಂಡಿದ್ದಾರೆ. ಜುಲೈ 27 ರಂದು ಫ್ರಾನ್ಸ್‌ನಿಂದ ಹೊರಟಿದ್ದ ಮೊದಲ ಹಂತದ ಐದು ರಾಫೆಲ್ ಯುದ್ಧ ವಿಮಾನಗಳು ಇಂದು ಮಧ್ಯಾಹ್ನ ಹರಿಯಾಣದ ಅಂಬಾಲ ವಾಯುನೆಲೆಗೆ ಬಂದಿಳಿದ್ದು ಸ್ವಾಗತ ಕೋರಲಾಯಿತು.
ಫ್ರಾನ್ಸ್ ಮೂಲದ ಡಸಾಲ್ಟ್ ಕಂಪೆನಿ ನಿರ್ಮಿತ 5 ರಾಫೆಲ್ ಫೈಟರ್ ಜೆಟ್ ವಿಮಾನಗಳು ಇದಾಗಿದ್ದು, ಈ ಐದು ಯುದ್ಧ ವಿಮಾನಗಳ ಪೈಕಿ ಎರಡು ವಿಮಾನಗಳು 2 ಸೀಟರ್ ತರಬೇತಿ ವಿಮಾನಗಳಾಗಿದ್ದು, 3 ಸಿಂಗಲ್ ಸೀಟರ್ ಫೈಟರ್ ಜೆಟ್ ಗಳಾಗಿವೆ.
ಈ ಕುರಿತು ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತೀಯ ಮಿಲಿಟರಿ ಇತಿಹಾಸದಲ್ಲಿ ಹೊಸ ಯುಗ ಆರಂಭವಾಗಿದೆ. ಮೋದಿ ತೀರ್ಮಾನ ಕೈಗೊಂಡಿದ್ದರಿಂದ ರಫೆಲ್ ಖರೀದಿ ಮಾಡಲಾಗಿದೆ. ಪ್ರಧಾನಿ ಮೋದಿ ಧೈರ್ಯ ತೀರ್ಮಾನಕ್ಕೆ ಧನ್ಯವಾದ ಎಂದು ಟ್ವೀಟ್ ಮಾಡಿದ್ದಾರೆ.
Key words: Indian Army-Rafale- fighter plane- landed –hariyana- Ambala Air Base.