ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಉನ್ನತ ಹುದ್ದೆ ಮತ್ತು ಶಾಶ್ವತ ಆಯೋಗ ರಚನೆ  ಮಾಡಬೇಕು- ಸುಪ್ರೀಂಕೋರ್ಟ್ ಮಹತ್ವದ ತೀರ್ಪು…

ನವದೆಹಲಿ,ಫೆ,17,2020(www.justkannada.in): ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಉನ್ನತ ಹುದ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ.  ಸೇನೆಯಲ್ಲಿರುವ ಮಹಿಳೆಯರಿಗೆ 3 ತಿಂಗಳೊಳಗೆ ಶಾಶ್ವತ ಆಯೋಗ ರಚನೆ ಮಾಡಬೇಕು ಮತ್ತು ಮಹಿಳೆಯರಿಗೆ ಕಮಾಂಡ್ ಹುದ್ದೆ ನೀಡಬೇಕೆಂದು  ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ರ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ಅಜಯ್ ರಸ್ತೊಗಿ ಅವರನ್ನೊಳಗೊಂಡ ನ್ಯಾಯಪೀಠ ಇಂದು ಈ ತೀರ್ಪು ನೀಡಿದೆ, ತನ್ನ ಆದೇಶವನ್ನು ಜಾರಿಗೆ ತರಲು ಕೇದ್ರ ಸರ್ಕಾರಕ್ಕೆ ಮೂರು ತಿಂಗಳ ಸಮಯಾವಕಾಶ ನೀಡಿದೆ. ಈ ಮೂಲಕ ಪುರಷ- ಮಹಿಳೆ ಸಮಾನತೆಯನ್ನ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಮಹಿಳೆಯರಿಗೆ ಸೇನೆಯಲ್ಲಿ ಕಮಾಂಡ್‌ ಹುದ್ದೆ ನೀಡಲು ದೈಹಿಕ ಸಾಮರ್ಥ್ಯ ಮತ್ತು ಸಾಮಾಜಿಕ ಕಾರಣಗಳು ಅಡ್ಡಿ ಎಂಬ ಕೇಂದ್ರ ಸರ್ಕಾರದ ವಾದ ಗೊಂದಲದಿಂದ ಕೂಡಿದೆ. ಕೇಂದ್ರ ಸರ್ಕಾರ ಪೂರ್ವಾಗ್ರಹ ಪೀಡಿತವಾಗಿದೆ. ಸೇನೆಯಲ್ಲಿ ಮಹಿಳೆಯರಿಗೆ ಉನ್ನತ ಹುದ್ದೆ ನೀಡಬೇಕು. 20 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ ಮಹಿಳೆಯರಿಗೆ ಉನ್ನತ ಹುದ್ದೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

Key words: Indian Army- Women -higher post – permanent commission-Supreme Court