ಬೆಂಗಳೂರು,ಜು,1,2020(www.justkannada.in): ಕೊರೋನಾ ಸೋಂಕಿತ ವ್ಯಕ್ತಿ ನಡುರಸ್ತೆಯಲ್ಲೇ ಪ್ರಾಣ ಬಿಟ್ಟ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
52 ವರ್ಷದ ಕೊರೋನಾ ಸೋಂಕಿತ ವ್ಯಕ್ತಿ ಆಸ್ಪತ್ರೆಗೆ ರವಾನಿಸುವ ವೇಳೆ ಸಾವನ್ನಪ್ಪಿದ್ದಾರೆ. ವಿಜಯನಗರದ ನಿವಾಸಿಯಾಗಿರುವ ವ್ಯಕ್ತಿಗೆ ಶೀತ ಕೆಮ್ಮು ಇದ್ದ ಹಿನ್ನೆಲೆ ಕೊರೋನಾ ಟೆಸ್ಟ್ ಮಾಡಿಸಲಾಗಿತ್ತು. ವ್ಯಕ್ತಿಗೆ ಭಾನುವಾರದಂದೇ ಕೊರೋನಾ ಸೋಂಕು ದೃಢವಾಗಿತ್ತು.
ಬಳಿಕ ಬಿಬಿಎಂಪಿ ಅಧಿಕಾರಿಗಳು ಕರೆ ಮಾಡಿ ವೈದ್ಯರೇ ಬಂದು ಕರೆದುಕೊಂಡು ಹೋಗುವುದಾಗಿ ತಿಳಿಸಿದ್ದರು. ನಂತರ ಸೋಂಕಿತ ವ್ಯಕ್ತಿಗೆ ಸೋಮವಾರ ಉಸಿರಾಟದ ತೊಂದರೆ ಹೆಚ್ಚಾದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಈ ವೇಳೆ ಅಧಿಕಾರಿಗಳು ಇದು ನಮ್ಮ ವ್ಯಾಪ್ತಿಗೆ ಬರಲ್ಲ ಎಂದು ಕರೆ ಕಟ್ ಮಾಡಿದ ಆರೋಪ ಕೇಳಿ ಬಂದಿದೆ.
ಕಳೆದ ಮೂರು ದಿನಗಳಿಂದ ಸೋಂಕಿತನನ್ನ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ ಆರೋಪ ಬಿಬಿಎಂಪಿ ಅಧಿಕಾರಿಗಳ ಮೇಲೆ ಕೇಳಿ ಬಂದಿದೆ. ಇಂದು ಮನೆಯವರೇ ಖಾಸಗಿ ವಾಹನದಲ್ಲಿ ಸೋಂಕಿತ ವ್ಯಕ್ತಿಯನ್ನ ಸಾಗಿಸುವ ವೇಳೆ ರಸ್ತೆಯಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
Key words: Inhumane incident – Bangalore-Corona – person-death