ಮೆಲ್ಬರ್ನ್, ಜನವರಿ 05, 2020 (www.justkannada.in):
ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಿನ್ನೆ ನಡೆದ ಅಭ್ಯಾಸದ ವೇಳೆ ರಾಹುಲ್ ಗಾಯಗೊಂಡ ಹಿನ್ನೆಲೆಯಲ್ಲಿ ಸರಣಿಯಿಂದ ಹೊರ ಬಂದಿದ್ದಾರೆ.
ವೈದ್ಯಕೀಯ ತಂಡದ ಸಲಹೆಯ ಮೇರೆಗೆ ರಾಹುಲ್ ಸರಣಿಯ ಉಳಿದ 2 ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.
ಭಾರತಕ್ಕೆ ವಾಪಸ್ಸಾದ ಬಳಿಕ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ 3 ವಾರಗಳ ಕಾಲ ಪುನಶ್ಚೇತನ ಶಿಬಿರದಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದ ಏಕದಿನ ಹಾಗೂ ಟಿ-20 ಪಂದ್ಯಗಳನ್ನಾಡಿದ್ದ ರಾಹುಲ್, ಟೆಸ್ಟ್ ಸರಣಿಯಲ್ಲಿ ಅವಕಾಶ ವಂಚಿತರಾಗಿದ್ದರು.