ದೇಶದಲ್ಲೇ ವಿನೂತನವಾದ `ಪುನೀತ್’ ಉಪಗ್ರಹ ಅಭಿವೃದ್ಧಿ ಯೋಜನೆಗೆ ಚಾಲನೆ.

ಬೆಂಗಳೂರು,ಫೆಬ್ರವರಿ,28,2022(www.justkannada.in):  ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲೆಗಳ ಮಕ್ಕಳೇ ಉಪಗ್ರಹ ಅಭಿವೃದ್ಧಿ ಮಾಡಲಿದ್ದು, ಇದಕ್ಕೆ ದಿವಂಗತ ನಟ ಪುನೀತ್ ರಾಜಕುಮಾರ್ ಗೌರವಾರ್ಥವಾಗಿ ಅವರ ಹೆಸರನ್ನೇ ಇಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ ನಾರಾಯಣ್ ಹೇಳಿದ್ದಾರೆ.

`ರಾಷ್ಟ್ರೀಯ ವಿಜ್ಞಾನ ದಿನ’ದ ಅಂಗವಾಗಿ ಮಲ್ಲೇಶ್ವರಂನ 18ನೇ ಅಡ್ಡರಸ್ತೆಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ಮತ್ತು ಭಾರತೀಯ ತಂತ್ರಜ್ಞಾನ ಸಮಾವೇಶ ಒಕ್ಕೂಟ (ಐಟಿಸಿಎ) ಮಾಡಿಕೊಂಡ ಒಡಂಬಡಿಕೆಯನ್ನು ವಿನಿಮಯ ಮಾಡಿಕೊಳ್ಳಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, “ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅಂಗವಾಗಿ ಐಟಿಸಿಎ 75 ಉಪಗ್ರಹಗಳನ್ನು ಉಡಾಯಿಸುತ್ತಿದೆ. ಈ ಪೈಕಿ ಒಂದು ಉಪಗ್ರಹವನ್ನು ರಾಜ್ಯ ಸರಕಾರದ ಸಹಕಾರದಲ್ಲಿ ಸರಕಾರಿ ಶಾಲೆಗಳ ಮಕ್ಕಳು ನಿರ್ಮಿಸುತ್ತಿದ್ದು, ಇದಕ್ಕೆ 1.90 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ,’ ಎಂದರು.

ಉದ್ದೇಶಿತ ಉಪಗ್ರಹವು 1.50 ಕೆ.ಜಿ. ತೂಕವಿರಲಿದ್ದು, ಯೋಜನೆಯ ಗ್ರೌಂಡ್ ಸ್ಟೇಷನ್ ಕೂಡ ಮಲ್ಲೇಶ್ವರದ ಇದೇ ಕಾಲೇಜಿನ ಆವರಣದಲ್ಲಿ ಇರಲಿದೆ. ಎಲ್ಲ ನಿರ್ವಹಣೆಯೂ ಇಲ್ಲಿಂದಲೇ ಆಗಲಿದೆ. ಯೋಜನೆಗೆ 20 ಸರಕಾರಿ ಶಾಲೆಗಳ 100 ಪ್ರತಿಭಾವಂತ ಮಕ್ಕಳನ್ನು ನಾನಾ ಸ್ಪರ್ಧೆ ಮತ್ತು ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಈ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಆನ್-ಲೈನ್, ಆಫ್-ಲೈನ್, ಹ್ಯಾಂಡ್ಸ್-ಆನ್ ಮತ್ತು ಟ್ಯುಟೋರಿಯಲ್ ಮಾದರಿಗಳಲ್ಲಿ ಪರಿಚಯಾತ್ಮಕ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಜತೆಗೆ, ಎರಡೂ ಭಾಷೆಗಳಲ್ಲಿ ಅಗತ್ಯ ಪಠ್ಯಗಳ ವೆಬ್-ಲಿಂಕ್ ಒದಗಿಸಲಾಗುವುದು. ಈ ಸಂಬಂಧದ ತರಗತಿಗಳು ಏಪ್ರಿಲ್ 22ರಿಂದ ಆರಂಭವಾಗಲಿವೆ ಎಂದು ಅವರು ಮಾಹಿತಿ ನೀಡಿದರು.

ಈ ತರಬೇತಿಯಲ್ಲಿ ಉಪಗ್ರಹ ಪೇಲೋಡ್ ತಿಳಿವಳಿಕೆ, ನ್ಯಾನೋ ಉಪಗ್ರಹಗಳ ಪರಿಚಯ, ಬೆಂಗಳೂರಿನಲ್ಲಿರುವ ವೈಜ್ಞಾನಿಕ ಸಂಸ್ಥೆಗಳಿಗೆ ಭೇಟಿ, ಉಡಾವಣೆ ಸಮಯದಲ್ಲಿ ಶ್ರೀಹರಿಕೋಟಾಗೆ ಭೇಟಿ, ವಿಜ್ಞಾನಿಗಳೊಂದಿಗೆ ಸಂವಾದ, ಗ್ರೌಂಡ್ ಸ್ಟೇಷನ್ ನಲ್ಲಿ ತರಬೇತಿ, ಅಗತ್ಯ ಪುಸ್ತಕಗಳ ಪ್ರಕಟಣೆ ಮುಂತಾದ ಚಟುವಟಿಕೆಗಳು ಇರಲಿವೆ ಎಂದು ಅಶ್ವತ್ ನಾರಾಯಣ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಡಿ.ವಿ.ಸದಾನಂದ ಗೌಡ, ಸಮಾಜದ ಸಬಲೀಕರಣಕ್ಕೆ ವಿಜ್ಞಾನದ ಆವಿಷ್ಕಾರಗಳಲ್ಲಿ ಪರಿಹಾರೋಪಾಯಗಳಿವೆ. ಆದ್ದರಿಂದ ಯುವಜನರಲ್ಲಿ ಮೊದಲಿನಿಂದಲೇ ವೈಜ್ಞಾನಿಕ ಕುತೂಹಲ ಬೆಳೆಸಬೇಕು,’ ಎಂದರು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಸ್. ಅಯ್ಯಪ್ಪನ್ ಮಾತನಾಡಿ, `ದೇಶದಲ್ಲಿ ಪ್ರತೀ ಒಂದು ಕೋಟಿ ಜನಸಂಖ್ಯೆಗೆ ಕೇವಲ 2,500 ಸಂಶೋಧಕರು ಮಾತ್ರವೇ ಇದ್ದಾರೆ. ಅಂದರೆ, ಒಟ್ಟಾರೆಯಾಗಿ ಈ ಸಂಖ್ಯೆ 5 ಲಕ್ಷವನ್ನೂ ದಾಟುವುದಿಲ್ಲ. ಹೀಗಾಗಿ ನಮ್ಮಲ್ಲಿ ಆಹಾರ-ಧಾನ್ಯಗಳು ವ್ಯರ್ಥವಾಗುತ್ತಿವೆ. ಮುಂದುವರಿದ ದೇಶಗಳಿಗೆ ಹೋಲಿಸಿದರೆ ಇದು ತೀರಾ ಕಡಿಮೆಯಾಗಿದೆ. ಜಾಗತಿಕ ಚಿಂತನೆ ಮತ್ತು ಸ್ಥಳೀಯ ಉಪಯುಕ್ತತೆ ಎನ್ನುವ ಸೂತ್ರ ನಮ್ಮದಾಗಬೇಕು,’ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ನ್ಯಾನೋ ತಂತ್ರಜ್ಞಾನ ವಿಷನ್ ಗ್ರೂಪ್ ಅಧ್ಯಕ್ಷ ಡಾ.ನವಕಾಂತ ಭಟ್, ಪ್ರೊ.ಎಚ್.ಎಸ್. ನಾಗರಾಜು, ಡಾ.ಹೇಮಂತಕುಮಾರ್, ಅಶೋಕ್ ರಾಯಚೂರು, ಸೌಮ್ಯಾ ವೈದ್ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿಜ್ಞಾನ ಕಿಟ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಿರ್ದೇಶಕ ಬಸವರಾಜ ಅವರು ಸ್ವಾಗತಿಸಿದರು.

ವಿಜ್ಞಾನ ಪ್ರದರ್ಶನದ ಆಕರ್ಷಣೆ

ಮಲ್ಲೇಶ್ವರದ ಪಿಯು ಕಾಲೇಜು ಮೈದಾನದಲ್ಲಿ ವಿಜ್ಞಾನ ಪ್ರದರ್ಶನ ಏರ್ಪಡಿಸಲಾಗಿತ್ತು. ಮಳಿಗೆಗಳಿಗೆ ಭೇಟಿ ನೀಡಿದ ಸಚಿವರು, ಸಂಸದರು ಮತ್ತು ವಿಜ್ಞಾನಿಗಳು, ಅಲ್ಲಿ ಪ್ರದರ್ಶನಕ್ಕಿಟ್ಟಿದ್ದ ವೈಜ್ಞಾನಿಕ ಸಾಧನಗಳು ಮತ್ತು ಉಪಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರದರ್ಶನಕ್ಕೆ ಸಾವಿರಾರು ವಿಜ್ಞಾನಾಸಕ್ತರು ಕೂಡ ಭೇಟಿ ನೀಡಿದ್ದು, ಗಮನಾರ್ಹವಾಗಿತ್ತು.

ಕಾರ್ಯಕ್ರಮದಲ್ಲಿ ಉಪಗ್ರಹಗಳ ಬಗ್ಗೆ ಸಮಗ್ರ ಮಾಹಿತಿ ನೀಡುವ ಕೈಪಿಡಿಯನ್ನೂ ಬಿಡುಗಡೆ ಮಾಡಲಾಯಿತು. ಜೊತೆಗೆ, ಎರಡು ಸರಕಾರಿ ಶಾಲೆಗಳಿಗೆ ಸಾಂಕೇತಿಕವಾಗಿ ವಿಜ್ಞಾನದ ಪ್ರಯೋಗ ಕಿಟ್ ವಿತರಿಸಲಾಯಿತು. ಉಳಿದ ಶಾಲೆಗಳಿಗೆ ಬಿಇಒಗಳ ಮೂಲಕ ಈ ಕಿಟ್ ತಲುಪಿಸಲಾಗುವುದು ಎಂದು ಸಚಿವ ಅಶ್ವತ್ ನಾರಾಯಣ್ ತಿಳಿಸಿದರು.

Key words: innovative-Punith- satellite-development-project

ENGLISH SUMMARY….

Govt. School Students Satellite Project named after Puneeth Rajkumar
100 Students of 20 schools will be involved, launch by September

Bengaluru: The satellite design and launching project by the Government School Students, has been named after Kannada actor Puneeth Rajkumar (Puneeth Rajkumar Student Satellite Project) who died a few months back and will be launched by September 2022.

Presiding over a function held at the government pre-university college at 18th cross, Malleshwara on the occasion of National Science Day and Inauguration of Karnataka Government School Students’ Satellite Project (KGS3Sat) Dr.C.N.Ashwatha Narayana, Minister for Science & Technology, made this announcement on Monday.

On the occasion, MoU inked between Karnataka Science & Technology Promotion Society (KSTePS) and Indian Technological Congress Association (ITCA) with regard to implementation of the project was exchanged. This is one of the 75 satellites to be launched in the country to celebrate 75 years of independence.

The ground station of the project will be set up at the premises of the college and 100 students of 20 government schools have been selected based on performances in various competitions and tests, he stated. Further, he told, the proposed satellite will weigh 1.5 KG.

A few years back, any satellite would have weighed a minimum of 50 KGs and the project would have cost about Rs 50-60 crore. But the development of technology has made it possible to reduce the satellite to weigh just 1.5 KG and project cost has been reduced to Rs. 1.90 Crores.

Introductory programmes through Online & Offline, hands-on learning, and tutorial models in both Kannada and English languages will be part of this project. In addition, the web links of required content will be provided to students and classes related this will commence from April 22, Minister Narayana informed.

Knowledge of satellite payload, introduction to nanosatellites, visiting scientific institutions located in the city of Bengaluru, visiting Sriharikota during the launch of the satellite, interaction with scientists, training at the ground station, publication of required books, and other activities will be part of Rs.1.90 crore project.

In his inaugural speech, D.V.Sadananda Gowda, MP, Bengaluru North, said, the ways for social empowerment lies in scientific research and innovations. He opined, that curiosity should be created in students right from the beginning of their early stages and it needs to be sustained constantly.

Prof.S.Ayyappan, Padmasri awardee and Chairman, Karnataka Science and Technological Academy told, at present in the country there are not more than 5 lakh researchers in the entire country. Saying, the number of researchers in the country is very low compared to the developed countries, he added, their numbers needs a drastic increase to take the country on the path of progress. He also felt there is a need to find an effective solution to check the wastage of agricultural produce in the country.

On this occasion, a handbook on satellite projects was released. The distribution of science experiment kits for government schools was also launched. Minister, MP, and scientists also had a glimpse of scientific models which were exhibited as part of the event.

Dr.Navakanta Bhat, Chairperson, State Vision Group for nanotechnology, Prof H.S.Nagaraju, Dr.Hemanta Kumar, Ashok Rayachuru, Basavaraju, Soumya Vaid were among the present.