ಬೆಂಗಳೂರು,ಜನವರಿ,12,2021(www.justkannada.in): ಸ್ವಾಮಿ ವಿವೇಕಾನಂದರ ಪ್ರೇರಣೆಯೊಂದಿಗೆ ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದರ ಜತೆಗೆ, ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 10 ದಶ ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ಸ್ವಾಮಿ ವಿವೇಕಾನಂದರ 158ನೇ ಜನ್ಮದಿನ ಕಾರ್ಯಕ್ರಮದಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಈ ವಿಚಾರ ತಿಳಿಸಿದರು.
ಶಿಕ್ಷಣದ ಎಲ್ಲ ಹಂತಗಳಲ್ಲೂ ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ಅಡಕಗೊಳಿಸುವುದರ ಜತೆಗೆ, ಉನ್ನತ ಶಿಕ್ಷಣದಲ್ಲಿ ಅವರು ನೀಡಿರುವ ಪ್ರೇರಣೆಯೊಂದಿಗೆ ಸರಕಾರ ಮಾಡಿರುವ ಕಾರ್ಯಕ್ರಮಗಳ ಪ್ರಾತ್ಯಕ್ಷಿಕೆಯನ್ನು ನಾನು ನೀಡಿದ್ದೇನೆ. ಇದಾದ ಮೇಲೆ ರಾಜ್ಯದಲ್ಲಿ ಹತ್ತು ದಶಲಕ್ಷ ಉದ್ಯೋಗಗಳನ್ನು ಸೃಷ್ಟಿ ಮಾಡುವ ಬಗ್ಗೆ ನಡೆದ ಉನ್ನತಮಟ್ಟದ ಚರ್ಚಾಗೋಷ್ಠಿಯಲ್ಲಿ ಅನೇಕ ಮೌಲಿಕ ಅಭಿಪ್ರಾಯಗಳು ವ್ಯಕ್ತವಾದವು. ಚರ್ಚೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಕ್ಷೇತ್ರಗಳ ಸಾಧಕರು ನೀಡಿರುವ ಸಲಹೆಗಳನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.
ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ…
ಕೌಶಲ್ಯಾಭಿವೃದ್ಧಿಯೂ ಸೇರಿದಂತೆ ಕೃಷಿ, ತೋಟಗಾರಿಕೆ, ಪ್ರವಾಸೋದ್ಯಮ ಸೇರಿದಂತೆ ಉದ್ಯೋಗ ಸೃಷ್ಟಿಯಾಗುವ ಅನೇಕ ಕ್ಷೇತ್ರಗಳನ್ನು ಪ್ರತಿನಿಧಿಸುವ ತಜ್ಞರು ಈ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಅವರೆಲ್ಲ ವಿವಿಧ ಕ್ಷೇತ್ರಗಳನ್ನು ಗುರುತಿಸಿದ್ದಾರೆ ಕೂಡ. ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಉದ್ಯೋಗ ಲಭ್ಯವಿರುವ ಕ್ಷೇತ್ರಗಳ ಬಗ್ಗೆ ಅವರು ಬೆಳಕು ಚೆಲ್ಲಿದರು. ಅವುಗಳ ಬಗ್ಗೆ ಇನ್ನೊಂದು ಹಂತದಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಗುವುದು. ಸ್ವಾಮಿ ವಿವೇಕಾನಂದರ ಪ್ರೇರಣೆಯೊಂದಿಗೆ ಈ ಕಾರ್ಯಕ್ರವನ್ನು ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಕ್ಷಿಪ್ರಗತಿಯಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ತಿಳಿಸಿದರು.
ಈ ದಿಸೆಯಲ್ಲಿ ಸರಕಾರ ಈಗಾಗಲೇ ಅನೇಕ ಕಾರ್ಯಕ್ರಗಳನ್ನು ಹಾಕಿಕೊಂಡಿದೆ. ಕೃಷಿ, ಕೃಷಿ ಮಾರುಕಟ್ಟೆ, ಉನ್ನತ ಶಿಕ್ಷಣ, ಪ್ರಾಥಮಿಕ ಶಿಕ್ಷಣ ಸೇರಿದಂತೆ ಅನೇಕ ಇಲಾಖೆಗಳಲ್ಲಿ ಗಮನಾರ್ಹ ಸುಧಾರಣೆಗಳನ್ನು ಜಾರಿಗೆ ತಂದಿದೆ. ನನ್ನ ಇಲಾಖೆಗಳ ಮಟ್ಟಿಗೆ ಹೇಳುವುದಾದರೆ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗ ಮಾರುಕಟ್ಟೆಗೆ ತಕ್ಕಂತೆ ತರಬೇತಿ ನೀಡಿ ಕೌಶಲ್ಯಭರಿತ ಮಾನವ ಸಂಪನ್ಮೂಲವನ್ನು ತಯಾರು ಮಾಡುವ ಕೆಲಸ ಯುದ್ಧೋಪಾದಿಯಲ್ಲಿ ನಡೆಯುತ್ತಿದೆ ಎಂದರು ಡಿಸಿಎಂ.
ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ, ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್‌ಎಂಸ್), ಡಿಜಿಟಲ್ ಕಲಿಕೆಯನ್ನು ಉತ್ತೇಜಿಸಲು ಉನ್ನತ ಶಿಕ್ಷಣ ಪಡೆಯುತ್ತಿರುವ ಸುಮಾರು 1.55 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗುಣಮಟ್ಟದ ಉಚಿತ ಟ್ಯಾಬ್ಲೇಟ್ ಪಿಸಿಗಳನ್ನು ನೀಡುವ ನಿರ್ಧಾರ, ಏಕೀಕೃತ ವಿಶ್ವವಿದ್ಯಾಲಯ ಹಾಗೂ ಕಾಲೇಜು ನಿರ್ವಹಣಾ ಸಿಸ್ಟಂ (ಯುಯುಸಿಎಂಸ್), ಡಿಪ್ಲೊಮೋ ಪಠ್ಯದ ಆಮೂಲಾಗ್ರ ಬದಲಾವಣೆ, ನಾಲ್ಕು ಹಂತಗಳಲ್ಲ ಯುವಕರ ಸಬಲೀಕರಣ, ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.34.6ರಷ್ಟಿರುವ ಯುವಜನರ ಕೌಶಲ್ಯಾಭಿವೃದ್ಧಿಗೊಳಿಸುವುದು, 2025ರ ಹೊತ್ತಿಗೆ 15,00,000 ಯುವಜನರು ಸಂಪೂರ್ಣವಾಗಿ ಕುಶಲಭರಿತರಾಗಿ ಹೊರಹೊಮ್ಮಲಿದ್ದಾರೆ. ಹೊಸ ಉದ್ಯೋಗ ಸೃಷ್ಟಿಯ ನಮ್ಮ ಕನಸಿಗೆ ಇದೆಲ್ಲ ಅಂಶಗಳು ಪೂರಕವಾಗಿವೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ಇನ್ನು ಉನ್ನತ ಶಿಕ್ಷಣ ವಿಭಾಗಗಳಾದ ಸ್ನಾತಕೋತ್ತರ, ಪದವಿ, ಪಾಲಿಟೆಕ್ನಿಕ್, ಎಂಜಿನಿಯರಿಂಗ್, ವೈದ್ಯಕೀಯ, ಜಿಟಿಟಿಸಿ, ಐಟಿಐಗಳಿಂದ 2024-25ರ ಹೊತ್ತಿಗೆ 24 ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಿಂದ ಹೊರಬರಲಿದ್ದಾರೆ ಎಂದ ಡಿಸಿಎಂ; ಇನ್ನು ಬಿಯಾಂಡ್ ಬೆಂಗಳೂರು, ನೂತನ ಐಟಿ ನೀತಿ, ಕರ್ನಾಟಕ ಆವಿಷ್ಕಾರ ಪ್ರಾಧಿಕಾರ, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್, ಎಎಸ್‌ಡಿಎಂ ನೀತಿ, ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯಿಂದಾಗಿ ಮುಂದಿನ ವರ್ಷಗಳಲ್ಲಿ ಉದ್ಯೋಗ ಸೃಷ್ಟಿ ದೊಡ್ಡ ಪ್ರಮಾಣದಲ್ಲಿ ಆಗಲಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.
ಇದಕ್ಕೂ ಮೊದಲು ಸ್ವಾಮಿ ವಿವೇಕಾನಂದರ 158ನೇ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾತನಾಡಿ; ಸ್ವಾಮಿ ವಿವೇಕಾನಂದರ ಚಿಂತನೆ ಮತ್ತು ಸಂದೇಶಗಳ ಪ್ರೇರಣೆಯೊಂದಿಗೆ ನಮ್ಮ ಸರಕಾರ ಕೆಲಸ ಮಾಡುತ್ತಿದೆ. ಶಿಕ್ಷಣವೂ ಸೇರಿದಂತೆ ಎಲ್ಲ ವಿಭಾಗಗಳಲ್ಲೂ ಅವರ ಸ್ಫೂರ್ತಿಯೊಂದಿಗೆ ಕೆಲಸ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ಹನ್ನೆರಡು ಮಂದಿ ಯವ ಸಾಧಕರಿಗೆ ಸನ್ಮಾನ ಮಾಡಿ ಗೌರವಿಸಿದರು. ಮುಖ್ಯಮಂತ್ರಿಗಳ ಭಾಷಣದ ನಂತರ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಮ್ಮ ವ್ಯಾಪ್ತಿಯಲ್ಲಿರುವ ಬರುವ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಲಶೀಲತೆ ಇಲಾಖೆಗಳಲ್ಲಿ ಸ್ವಾಮಿ ವಿವೇಕಾನಂದರ ಪ್ರೇರಣೆಯೊಂದಿಗೆ ಕೈಗೊಂಡಿರುವ ಸುಧಾರಣಾ ಕ್ರಮಗಳ ಪ್ರಾತ್ಯಕ್ಷಿಕೆ ನೀಡಿದರು.
ಬಳಿಕ ರಾಜ್ಯದಲ್ಲಿ 10 ದಶಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡುವ ನಿಟ್ಟಿನಲ್ಲಿ ಇರುವ ಅವಕಾಶಗಳು-ಸವಾಲುಗಳು ಕುರಿತ ಚರ್ಚಾಗೋಷ್ಠಿ ನಡೆಯಿತು. 1ಬ್ರಿಡ್ಜ್ ಸಂಸ್ಥೆ ಸಿಇಓ ಮದನ್ ಪದಕಿ ನಡೆಸಿಕೊಟ್ಟ ಈ ಗೋಷ್ಠಿಯಲ್ಲಿ ಕೃಷಿಕಲ್ಪ ಪೌಂಡೇಶನ್‌ನ ಸಿಇಓ ಸಿ.ಎಂ.ಪಾಟೀಲ್, ಬೆಂಗಳೂರಿನ ವೋಲ್ವೋ ಕಂಪನಿ ಸಿಇಓ ಕಮಲ್ ಬಾಲಿ, ವಿಶ್ರಾಂತ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ವಿನಯ್ ಲೂಥ್ರ, ಇಂಡಿ ವಿಲೇಜ್ ಸಿಇಓ ಸ್ಮಿತಾ ಮಾಲಿಪಾಟೀಲ್, ವಯತಿ ವೇವ್ಸ್ ಸಿಇಓ ದೇವಿಕಾ ಕೃಷ್ಣನ್ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.
ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರನಾಯಕ್, ಐಟಿಬಿಟಿ ಎಸಿಎಸ್ ರಮಣ ರೆಡ್ಡಿ, ಯೋಜನೆ ಇಲಾಖೆ ಎಸಿಎಸ್ ಶಾಲಿನಿ ರಜನೀಶ್, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಮತ್ತಿತರರು ಹಾಜರಿದ್ದರು.
English summary….
Under motivation of Swami Vivekananda, Govt. pledges to create 10 million jobs
Bengaluru, Jan. 12, 2021 (www.justkannada.in): Deputy Chief Minister and Higher Education Minister Dr. C.N. Aswhathnarayana today informed that the State Government has pledged to provide good quality higher education and create more than 10 million jobs in the state in the next five years.
He participated in a programme organised at the banquet hall in Vidhana Soudha, on Tuesday, as part of the 158th Birth Anniversary of Swami Vivekananda. “Along with adopting Swami Vivekananda’s messages in all the phases of education, I made a demonstration of the works done by the government with motivation of Swami Vivekananda. A lot of valuable opinions emerged in the high-level discussion held on creating more than 10 lakh job opportunities in the State. Several achievers in different sectors gave their suggestions during the discussion. The Government will consider all those suggestions seriously,” he added.
Keywords: Dr. C.N. Ashwathnarayan/ Govt. of Karnataka/ Swami Vivekananda jayanthi/ 10 million jobs in State
Key words: Inspired – Swami Vivekananda-10 million jobs -created – government-DCM-Ashwath narayan