ಬೆಂಗಳೂರು,ಅಕ್ಟೋಬರ್,27,2021(www.justkannada.in): ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ ಎಂಇಎಸ್ʼಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕುಂದಾ ನಗರಿಯ ಪ್ರತಿಷ್ಠೆಗೆ ಧಕ್ಕೆ ತಂದು ಅಲ್ಲಿನ ಸೌಹಾರ್ದ ವಾತಾವರಣವನ್ನು ಹಾಳು ಮಾಡುತ್ತಿರುವ ಎಂಇಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್, ಈಗ ಕನ್ನಡ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ. ಕನ್ನಡ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಸಕ್ಕೆ ಮುಂದಾಗಿದೆ ಎಂದು ಹೆಚ್.ಡಿಕೆ ಕಿಡಿ ಕಾರಿದ್ದಾರೆ.
ಕೆಲ ದಿನಗಳಿಂದ ಬೆಳಗಾವಿಯಲ್ಲಿ ಕನ್ನಡಿಗರನ್ನು ಎಂಇಎಸ್ ವಿನಾಕಾರಣ ಕೆಣಕುತ್ತಿದೆ. ಪ್ರತಿಭಟನೆಯ ವೇಳೆ ಕರ್ನಾಟಕ ಸರಕಾರವನ್ನು ಎಂಇಎಸ್ ಪುಂಡರು ಗೇಲಿ ಮಾಡಿದ್ದಾರೆ.
ಅಲ್ಲಿನ ಸರಕಾರಿ ಕಚೇರಿಗಳಲ್ಲಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲೇ ಕೊಡಬೇಕು ಎಂದು ಒತ್ತಾಯಿಸುವ ಭರದಲ್ಲಿ ಕರ್ನಾಟಕ ಸರಕಾರವನ್ನು ʼನಾಲಾಯಕ್ʼ ಎಂದು ಕರೆದು ʼಜೈ ಮಹಾರಾಷ್ಟ್ರʼ ಎಂದು ಘೋಷಣೆ ಕೂಗಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಖಂಡನೀಯ ಎಂದು ಹೆಚ್.ಡಿಕೆ ಟ್ವಿಟ್ಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ರಾಜಕೀಯವಾಗಿ ಮೂಲೆಗುಂಪಾಗಿರುವ ಎಂಇಎಸ್ , ತಮ್ಮ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಗೊಂದಲ, ಗದ್ದಲ ಉಂಟು ಮಾಡುತ್ತಿದೆ. ಭಾಷಾ ಭ್ರಾತೃತ್ವ, ಸ್ನೇಹಶೀಲತೆ ಹಾಗೂ ಶಾಂತಿ ಸಹನೆಗೆ ಹೆಸರಾಗಿರುವ ಕುಂದಾ ನಗರಿಯ ಪ್ರತಿಷ್ಠೆಯನ್ನು ಹಾಳು ಮಾಡುವ ದುರುದ್ದೇಶ ಇವರಿಗಿದೆ.
ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು. ಕನ್ನಡವನ್ನು ಅಪಮಾನಿಸುವ ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಹೆಚ್,ಡಿಕೆ ಒತ್ತಾಯಿಸಿದ್ದಾರೆ.
Key words: Insult – Kannada-government –action-MES -former CM –HD Kumaraswamy
ENGLISH SUMMARY…
Insult to Kannada: Former CM HDK asks State Govt. to teach MES rogues who called the govt. useless, a lesson
Bengaluru, October 27, 2021 (www.justkannada.in): Former Chief Minister H.D. Kumaraswamy has demanded the State Government teach the MES rogues in Belgavi, who are unnecessarily insulting Karnataka and Kannada, a lesson.
In his tweet, H.D. Kumaraswamy has expressed his ire upon the MES rogues, who are disturbing the peaceful environment in Belagavi and causing disrespect to the city.
The Maharashtra Ekikaran Samithi (MES) has lost its face politically in Belagavi by losing in the elections for several years. Hence, it has started its rogue activities as Kannada Rajyotsava is nearing. The MES activists have started insulting Kannada and Kannadigas as they have done earlier. They have mocked the Government of Karnataka during the protest. The MES activists have demanded that all the documents should be in the Marathi language. They have called the Govt. of Karnataka ‘Useless,’ and have shouted slogans ‘Jai Maharashtra,’ as reported in several media. It is condemnable, HDK’s tweet read.
He has demanded the State government not to neglect such issues that are concerned to our State and our language and has asked to teach the rogues a lesson.
Keywords: Belagavi/ MES/ rogues/ H.D.Kumaraswamy/ demands action