ಮಂಗಳೂರು,ಜೂ,15,2019(www.justkannada.in): ಚಕ್ರವರ್ತಿ ಸೂಲಿಬೆಲೆ ಅವವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮನಾಥ್ ರೈ ವಿರುದ್ದ ಪ್ರಕರಣ ದಾಖಲಾಗಿದೆ.
ಅಸೈಗೊಳಿ ಬಳಿ ಚುನಾವಣೆಯ ಪ್ರಚಾರ ಸಭೆಯಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ, ಮಾಜಿ ಸಚಿವ ರಮನಾಥ ರೈ, ಚಕ್ರವತ್ರಿ ಸೂಲಿಬೆಲೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸುವಂತೆ ಚಕ್ರವರ್ತಿ ಸೂಲಿಬೆಲೆ ಅವರು ಕೋರ್ಟ್ ಮೊರೆ ಹೋಗಿದ್ದರು.
ಈ ಪ್ರಕರಣ ಕುರಿತು ವಿಚಾರಣೆ ನಡೆಸಿದ ಮಂಗಳೂರು ಜೆಎಂಎಫ್ ಸಿ ಕೋರ್ಟ್, ರಾಮನಾಥ ರೈ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಶಾಸಕ ರಾಮನಾಥ ರೈ ವಿರುದ್ಧ ಕೋಣಾಜೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 500, 504 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Key words: insulting Case- chakravarthisulibele-Case –filed – Ramanath Rai