ಬೆಂಗಳೂರು,ಸೆ,16,2019(www.justkannada.in): ಪಕ್ಷ ಬಿಟ್ಟು ಹೋಗುವವರ ಬಗ್ಗೆ ನಾನು ತಲೆಕೆಡಸಿಕೊಂಡಿಲ್ಲ. ಪಕ್ಷ ಸಂಘಟನೆ ಮಾಡುವುದು ನನಗೆ ಗೊತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಸಾಧ್ಯತೆಗಳಿದೆ. ಮಧ್ಯಂತರ ಚುನಾವಣೆ ಯಾದರೆ ಸ್ವತಂತ್ರವಾಗಿ ಸ್ಪರ್ಧೆ ಮಾಡೋಣ. ಯಾರ ಜತೆ ಮೈತ್ರಿ ಬೇಡ. ಕುಮಾರಸ್ವಾಮಿ ಸಿಎಂ ಆಗಿ ಮಾಡಿರುವ ಒಳ್ಳೆಯ ಕೆಲಸಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕಿದೆ. ಪಕ್ಷದಿಂದ ಬೆಳೆದು ಪಕ್ಷದ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ. ಕಾರ್ಯಕರ್ತರನ್ನು ನಂಬಿ ಸಂಘಟನೆ ಮಾಡಿದ್ದೇನೆ. ಯಾರೇ ಪಕ್ಷ ತೊರೆದರೂ ಎದೆಗುಂದುವುದಿಲ್ಲ ಎಂದು ಹೇಳಿದರು.
ಅಥವಾ ಫೆಬ್ರವರಿಯಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಹೀಗಾಗಿ ಪಕ್ಷವನ್ನು ಸದೃಢಗೊಳಿಸಬೇಕಿದೆ. ಕುಮಾರಸ್ವಾಮಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ನಾನು ಸಹ ಜಿಲ್ಲಾ ಪ್ರವಾಸ ಕೈಗೊಂಡು ಪಕ್ಷ ಬಲಪಡಿಸುತ್ತೇನೆ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಒಳ್ಳೆಯ ಕೆಲಸ ಮಾಡಿದರೂ ನಮಗೆ ಸಹಕಾರ ಸಿಗಲಿಲ್ಲ. ಇನ್ನು ಮುಂದೆ ಆ ತಪ್ಪು ಮಾಡಲ್ಲ. ಎಲ್ಲ ಚುನಾವಣೆಗಳನ್ನು ಸ್ವತಂತ್ರವಾಗಿ ಎದುರಿಸೋಣ. ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬದಿಗೊತ್ತಿ ಪಕ್ಷ ಸಂಘಟಿಸಲು ಕಾರ್ಯಕರ್ತರಿಗೆ ಹೆಚ್.ಡಿ ದೇವೇಗೌಡರು ಮನವಿ ಮಾಡಿದರು.
Key words: Interim- election- Former Prime Minister -HD Deve Gowda – reaction- bangalore