ಬೆಂಗಳೂರು,ಜನವರಿ,9,2023(www.justkannada.in): ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಗುರಿಯಾಗಿಸಿಕೊಂಡು ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಮಾಡಲು ಮುಂದಾಗಿದ್ದ ಬಿಜೆಪಿಗೆ ಕೋರ್ಟ್ ಶಾಕ್ ನೀಡಿದೆ.
ಬಿಜೆಪಿಯ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬೆಂಗಳೂರಿನ 60ನೇ ಸಿಸಿಹೆಚ್ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹಾಗೆಯೇ ಸಚಿವ ಡಾ.ಅಶ್ವತ್ಥ ನಾರಾಯಣ್ ಸೇರಿ ಮತ್ತಿತರರಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಪುಸ್ತಕ ಬಿಡುಗಡೆಗೆ ತಡೆ ಕೋರಿ ಸಿದ್ದರಾಮಯ್ಯ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ತಂದೆಯ ವಿರುದ್ಧ ಮಾನಹಾನಿಕರ ವಿಷಯಗಳು ಪುಸ್ತಕದಲ್ಲಿವೆ. ಪುಸ್ತಕ ಬಿಡುಗಡೆ ಮಾಡಿದರೆ ತಂದೆಯ ಘನತೆಗೆ ಧಕ್ಕೆಯಾಗುತ್ತೆದೆ. ಸಿದ್ದರಾಮಯ್ಯ ಬೆಂಬಲಿಗರ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ. ಹೀಗಾಗಿ ಇದಕ್ಕೆ ತಡೆಯಾಜ್ಞೆ ನೀಡುವಂತೆ ಡಾ.ಯತೀಂದ್ರ ಸಿದ್ದರಾಮಯ್ಯ ಅರ್ಜಿಯಲ್ಲಿ ಮನವಿ ಮಾಡಿದ್ದರು.
ಇದೀಗ ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ಮಾರಾಟಕ್ಕೆ ತಡೆಯಾಜ್ಞೆ ನೀಡಿದೆ. ಮಾಧ್ಯಮ ಪ್ರಸಾರಕ್ಕೂ ಕೋರ್ಟ್ ತಡೆ ನೀಡಲಾಗಿದೆ.
Key words: Interim stay -court – release – Sidhu Nija kanasugalu- book