ಬೆಂಗಳೂರು,ಡಿಸೆಂಬರ್,2,2022(www.justkannada.in): ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಬಸವರಜ ಬೊಮ್ಮಾಯಿ, ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸರು ಯುವಕನ ಮೇಲೆ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ಮಹಾರಾಷ್ಟ್ರದವರು ಅನಗತ್ಯವಾಗಿ ವಿವಾದ ಮಾಡುತಿದ್ದಾರೆ ಎಂದು ಹೇಳಿದರು.
ಅಲ್ಪಸಂಖ್ಯಾತ ಮತದಾರರ ಹೆಸರು ಡಿಲಿಟ್ ಮಾಡಿದ್ದಾರೆಂಬ ಆರೋಪ ಸುಳ್ಳು. ಈ ಕುರಿತು ಚುನಾವಣಾ ಆಯೋಗ ಗಮನಿಸಿದೆ. ದೂರು ಬಂದಕಡೆ ಕ್ರಮ ಕೈಗೊಳ್ಳಲು ಹೇಳಿದ್ದೇವೆ. ಅನಧಿಕೃತ ಮತದಾರರನ್ನ ತೆಗೆದು ಹಾಕಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
Key words: investigate – assault – student – hoisted – Kannada flag- CM Bommai.