ಕಲಬುರಗಿ, ಅ. 5,2019(www.justkannada.in): ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 16 ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ 2016 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.
ಕಳೆದ 15 ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಈಗ ಅಮ್ಮ ಪ್ರಶಸ್ತಿಗೆ 16 ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದಾಗಿದೆ. ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ : ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರು, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ಮುನ್ನೂರು ಪ್ರತಿಷ್ಠಾನ “ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಜಿ. ಕೆ. ಕ್ರಾಸ್, ಊಡಗಿ ರಸ್ತೆ, ಸೇಡಂ-585 222. ಕಲಬುರಗಿ ಜಿಲ್ಲೆ. ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: 9731666052 ಸಂಪರ್ಕಿಸಬಹುದು.
Key words: Invitation – 16th Annual- amma Award-kalburgi