ಚಿಕ್ಕಬಳ್ಳಾಪುರ,ಆಗಸ್ಟ್,12,2023(www.justkannada.in): ಮನಿ ಡಬ್ಲಿಂಗ್ ಪ್ರಕರಣದಲ್ಲಿ ಶಾಮೀಲಾದ ಆರೋಪದ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಇಬ್ಬರು ಕಾನ್ ಸ್ಟೇಬಲ್ ಗಳನ್ನ ಅಮಾನತು ಮಾಡಲಾಗಿದೆ.
ಬಾಗೇಪಲ್ಲಿ ಠಾಣೆಯ ಐಬಿ ಕಾನ್ಸ್ಟೇಬಲ್ ನರಸಿಂಹಮೂರ್ತಿ, ಕಾನ್ಸ್ಟೇಬಲ್ ಅಶೋಕ್ ಅವರನ್ನು ಅಮಾನತು ಮಾಡಿ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ರವಿಕುಮಾರ್ ಅವರನ್ನು ಅಮಾನತು ಮಾಡಿ ಕೇಂದ್ರ ವಲಯ ಐ.ಜಿ.ಪಿ. ರವಿಕಾಂತೇ ಗೌಡ ಆದೇಶಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರವಿಕುಮಾರ್ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಚೇಳೂರು ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದರು. ಬಾಗೇಪಲ್ಲಿ ಠಾಣೆ ವ್ಯಾಪ್ತಿಯಲ್ಲಿ ಪಿಂಕ್ ಟು ಗ್ರೀನ್ ನೋಟ್ ಜಾಲದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ ಬಿಡುಗಡೆ ಮಾಡಿದ್ದ ಬಾಗೇಪಲ್ಲಿ ಪೊಲೀಸರ ವಿರುದ್ಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. 5 ದಿನ ಕಳೆದರೂ ಪೊಲೀಸರು ಪ್ರಕರಣ ದಾಖಲಿಸದೇ ಮುಚ್ಚಿ ಹಾಕಲು ಯತ್ನಿಸಿದ್ದರು ಎನ್ನಲಾಗಿತ್ತು.
Key words: involvement – money doubling case- police inspector – constables – suspended.