ಯಾದಗಿರಿ,ಏಪ್ರಿಲ್,12,2025 (www.justkannada.in): ಐಪಿಎಲ್ ಜ್ವರ ಶುರುವಾಗುತ್ತಿದ್ದಂತೆ ಬೆಟ್ಟಿಂಗ್ ದಂಧೆ ಹೆಚ್ಚಾಗಿದ್ದು ಈ ಮಧ್ಯೆ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಬುಕ್ಕಿಗಳನ್ನು ಯಾದಗಿರಿಯ ಸಿಇಎನ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸುರಪುರ ತಾಲ್ಲೂಕಿನ ಅರಳಹಳ್ಳಿ ಗ್ರಾಮದ ಶ್ರವಣ್ ಹುಣಸಗಿ ತಾಲ್ಲೂಕಿನ ಹೆಬ್ಬಾಳ ಗ್ರಾಮದ ದೇವರಾಜ್ ಬಂಧಿತ ಬುಕ್ಕಿಗಳು. ಬಂಧಿತರಿಂದ ಪೊಲೀಸರು 5 ಮೊಬೈಲ್ ಸ್ವಿಫ್ಟ್ ಕಾರು ಬ್ಯಾಂಕ್ ಖಾತೆಯಲ್ಲಿದ್ದ 11 ಲಕ್ಷ ರೂ. ಹಣವನ್ನ ಸೀಜ್ ಮಾಢಿದ್ದಾರೆ ಎನ್ನಲಾಗಿದೆ.
ಯಾದಗಿರಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Key words: Two bookies, arrested, IPL betting