ನವದೆಹಲಿ,ಡಿಸೆಂಬರ್,18,2020(www.justkannada.in) : ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ವರ್ಗಾವಣೆ ಮಾಡಿದ್ದು, ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಇದು ಒಕ್ಕೂಟ ವ್ಯವಸ್ಥೆಯ ಮೇಲಿನ ಆಕ್ರಮಣ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳ ಆಡಳಿತದಲ್ಲಿ ಕೇಂದ್ರದ ಹಸ್ತಕ್ಷೇಪವನ್ನು ನಾನು ಖಂಡಿಸುತ್ತೇನೆ. ಚುನಾವಣೆಗೆ ಮುನ್ನ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ಕರೆಸಿಕೊಳ್ಳುವ ಮೂಲಕ, ಆಯಾ ರಾಜ್ಯಗಳ ಹಕ್ಕುಗಳನ್ನು ಅತಿಕ್ರಮಿಸಿದಂತಾಗಿದೆ.

ಇದು ಒಕ್ಕೂಟದ ಮೇಲಿನ ಆಕ್ರಮಣ ಮತ್ತು ಅಸ್ಥಿರಗೊಳಿಸುವ ಪ್ರಯತ್ನವಾಗಿದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.
key words : IPS-officers-Transfer-Center-Service-Attack- federal-system-Arvind Kejriwal-accused