ಬೆಂಗಳೂರು, ಡಿಸೆಂಬರ್ 21, 2019 (www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಗೋಲಿಬಾರ್ ನಲ್ಲಿ ಸತ್ತವರು ಹಿಂಸಾಚಾರಿಗಳಲ್ಲ, ಅವರು ಅಮಾಯಕರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಿನ್ನೆ ನನ್ನನ್ನು ಮಂಗಳೂರು ಪ್ರವೇಶಿಸಲು ಅವಕಾಶ ನೀಡಲಿಲ್ಲ. ನಾನು ವಿರೋಧ ಪಕ್ಷದ ನಾಯಕ. ನಾನು ಶಾಂತಿ ಕದಡಲು ಹೋಗಿರಲಿಲ್ಲ. ಆದರೆ ಶಾಂತಿ ಕಾಪಾಡುವಂತೆ ಮನವಿ ಮಾಡಲು ಹೋಗಿದ್ದೆ ಎಂದರು.
ಡಿಸೆಂಬರ್ 23 ಸೋಮವಾರದಂದು ನಾನು ಮಂಗಳೂರಿಗೆ ಭೇಟಿ ನೀಡುತ್ತೇನೆ. ಬೇಕಾದರೆ ನನ್ನನ್ನೂ ಬಂಧಿಸಲಿ ಎಂದು ಸಿದ್ದರಾಮಯ್ಯ ಸವಾಲೆಸೆದರು. ರಾಜ್ಯದಲ್ಲಿ ಗೃಹ ಸಚಿವರು ಇದ್ದಾರಾ? ಎಲ್ಲವನ್ನೂ ಪೊಲೀಸರೇ ನಿರ್ಧರಿಸಿದ್ದಾರೆ ಎಂದು ಹೇಳುವುದಾದರೆ ಗೃಹ ಸಚಿವರು ಇದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದು ಟೀಕಿಸಿದ್ದಾರೆ.