ಶ್ರೀಹರಿಕೋಟಾ,ಸೆಪ್ಟಂಬರ್,2,2023(www.justkannada.in): ಚಂದ್ರಯಾನ-3 ಯಶಸ್ವಿ ಬಳಿಕ ಮತ್ತೊಂದು ಸಾಧನೆ ಮಾಡಲು ಇಸ್ರೋ ಮುಂದಾಗಿದ್ದು, ಚಂದ್ರಯಾನ ಸಕ್ಸಸ್ ಬೆನ್ನಲ್ಲೇ ಇದೀಗ ಸೂರ್ಯಯಾನಕ್ಕೆ ಸಜ್ಜಾಗಿದೆ.
ಸೂರ್ಯನ ಅಧ್ಯಯನ ಮಾಡುವ ಉದ್ದೇಶದಿಂದ ಇಸ್ರೋ ಆದಿತ್ಯ ಎಲ್-1 ನೌಕೆಯನ್ನು ಇಂದು ರಂದು ಬೆಳಿಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಉಡಾವಣೆ ಮಾಡಲಿದೆ. ಈ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಲು ಇಸ್ರೋ ಸಿದ್ಧತೆ ನಡೆಸಿದೆ.
ಆದಿತ್ಯ ಎಲ್-1 ಉಡಾವಣೆಯನ್ನು ಸಾರ್ವಜನಿಕರು ಕೂಡ ನೇರವಾಗಿ ವೀಕ್ಷಣೆ ಮಾಡಬಹುದಾಗಿದೆ. ಇಂದು ಬೆಳಿಗ್ಗೆ 11.50ಕ್ಕೆ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳುವ ಆದಿತ್ಯ ಎಲ್ -1 ಅನ್ನು ಲಾಂಚ್ ವೀವ್ ಗ್ಯಾಲರಿಯಿಂದ ನೇರವಾಗಿ ವಿಕ್ಷಿಸಲು ಇಸ್ರೋ ಸಾರ್ವಜನಿಕರಿಗೆ ಅವಕಾಶ ನೀಡಿದೆ. ಇದಕ್ಕೆ ಇಸ್ರೋ ವೆಬ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.
Key words: ISRO – launch – Aditya L-1 -today.