ಬೆಂಗಳೂರು,ಮೇ,28,2022(www.justkannada.in): ಬೆಳ್ಳಂಬೆಳಿಗ್ಗೆ ಉದ್ಯಮಿ, ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಶನಿವಾರ ಬೆಳಗ್ಗೆ ನಾಲ್ಕು ಇನೋವಾ ಕಾರಿನಲ್ಲಿ ಬಂದ ಐಟಿ ಅಧಿಕಾರಿಗಳು ವಸಂತನಗರದಲ್ಲಿರುವ ಕೆಜಿಎಫ್ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕೆಜಿಎಫ್ ಬಾಬು ಸ್ಪರ್ಧಿಸಿ ಪರಾಭವಗೊಂಡಿದ್ದರು. ಈ ನಡುವೆ 2023 ರ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ಕೆಜಿಎಫ್ ಬಾಬು ಸಿದ್ದತೆ ನಡೆಸಿದ್ದರು ಎನ್ನಲಾಗಿದೆ.
Key words: IT attack – businessman – Congress leader- KGF Babu- house