ಬೆಂಗಳೂರು,ಜೂ,15,2019(www.justkannada.in): ಐಎಂಎ ಜ್ಯೂಯೆಲ್ಸ್ ಮಾಲೀಕನಿಂದ ಅಮಾಯಕರಿಗೆ ಆಗಿರುವ ಅನ್ಯಾಯಕ್ಕೆ ಸ್ಪಂದಿಸುವ ಸಲುವಾಗಿ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಮಧ್ಯಸ್ಥಿಕೆಗೆ ಕ್ರಮ ಕೈಗೊಳ್ಳಲಿದ್ದಾರೆ. ಐಎಂಎ ಸಂಸ್ಥೆಯಿಂದ ವಂಚನೆಗೊಳಗಾದವರಿಗೆ ಹಣ ವಾಪಸ್ ಕೊಡಿಸುವ ಜವಾಬ್ದಾರಿ ನಮ್ಮ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದರು. .
ಬೆಂಗಳೂರಿನ ಆನಂದ್ ರಾವ್ ಸರ್ಕಲ್ ನಲ್ಲಿ ಬಿಜೆಪಿ ನಾಯಕರು ಆಹೋರಾತ್ರಿ ಧರಣಿ ನಡೆಸುತ್ತಿದ್ದು ಧರಣಿ ನಿರತ ಸ್ಥಳದಲ್ಲಿ ಬೆಂಬಲ ಸೂಚಿಸಲು ಆಗಮಿಸಿದ್ದ ಅಲ್ಪಸಂಖ್ಯಾತ ರನ್ನುದ್ದೇಶಿಸಿ ಬಿಎಸ್ ಯಡಿಯೂರಪ್ಪ ಮಾತನಾಡಿ ಈ ವಿಷಯ ತಿಳಿಸಿದರು.
ಜಾರಿ ನಿರ್ದೇಶನಾಲಯದ ಮೂಲಕವೂ ಈ ಹಗರಣದ ತನಿಖೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಹಣ ಕಳೆದುಕೊಂಡ ಅಮಾಯಕರಿಗೆ ಹಣ ವಾಪಸ್ ಕೊಡಿಸುವುದು ಬಿಜೆಪಿ ಜವಾಬ್ದಾರಿ. ಮನ್ಸೂರ್ ನನ್ನು ಎಲ್ಲಿದ್ದರೂ ಪತ್ತೆ ಹಚ್ಚಲು ಕೇಂದ್ರ ಸರ್ಕಾರ ಕ್ರಮ ಜರುಗಿಸುತ್ತದೆ. ಮನ್ಸೂರ್ ಖಾನ್ ಗೆ ರಕ್ಷಣೆ ಕೊಡಲು ಬಿಡುವುದಿಲ್ಲ. ಈ ಪ್ರಕರಣದ ಸಿಬಿಐ ತನಿಖೆಯಿಂದ ಮಾತ್ರವೇ ಅಮಾಯಕರಿಗೆ ನ್ಯಾಯ ಸಿಗಲು ಸಾಧ್ಯ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.
ರಾಜ್ಯ ಸರ್ಕಾರ ಇಂತಹ ವಂಚನೆ ಮಾಡುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ 2019 ರ ಫೆಬ್ರವರಿ ಯಲ್ಲೇ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ರಾಜ್ಯ ಸರ್ಕಾರವೇ ಈಗಿನ ಅನ್ಯಾಯಕ್ಕೆ ಕಾರಣವಾಗಿದೆ ಎಂದು ಯಡಿಯೂರಪ್ಪ ಹೇಳಿದರು.
Key words: It is our responsibility to refund-BJP President B, S Yeddyurappa assures to IMA victims.
#responsibility #refund #BSYeddyurappa #assures #IMA #victims.