ಬೆಳಗಾವಿ,ಮೇ,25,2019(www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಈ ಸ್ಥಿತಿಗೆ ಹೊಂದಾಣಿಕೆಯೇ ಕಾರಣ. ದೊಡ್ಡ ಸೋಲಿಗೆ ಹೊಂದಾಣಿಕೆಯೇ ಕಾರಣವಿರಬಹುದು ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದು ನಿಜ. ಯಾರೇ ಸೋತರೂ ರಾಜೀನಾಮೆ ಇಂಗಿತ ವ್ಯಕ್ತಪಡಿಸುವುದು ಹೊಸದೇನಲ್ಲ. ಹೀಗಾಗಿ ಶುಕ್ರವಾರ ನಡೆದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ವಿಚಾರ ಪ್ರಸ್ತಾಪವಾಗಿತ್ತು. ಸ್ವತಃ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೇ ಕೆಳಕ್ಕಿಳಿಯುವುದಾಗಿ ಹೇಳಿದ್ದರು. ಆದರೆ, ಅದಕ್ಕೆ ಸಭೆಯಲ್ಲಿ ಯಾರೂ ಒಪ್ಪಿಗೆ ಸೂಚಿಸಲಿಲ್ಲ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲು ಮನವಿ ಮಾಡಿದವು ಎಂದರು. ಎಂದು ಸತೀಶ್ ತಿಳಿಸಿದರು.
ಅಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಬಿಜೆಪಿ ಅಪರೇಷನ್ ಕಮಲಕ್ಕೆ ಮುಂದಾಗಿದೆ. ಮೇ29ರಿಂದ ಅಪರೇಷನ್ ಕಮಲ ಶುರುಮಾಡಲಿದೆ. ನಮ್ಮ ಶಾಸಕರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಅವರು ಅಪರೇಷನ್ ಕಮಲ ಮಾಡಿದರೇ ನಾವು ಉಲ್ಟಾ ಅಪರೇಷನ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
Key words: It is true that hd kumaraswamy Proposal resignation of the CM post
#Satishjarakiholi #belagavi