ಬೆಂಗಳೂರು,ಅಕ್ಟೋಬರ್,7,2021(www.justkannada.in): ಬೆಳ್ಳಂಬೆಳಗ್ಗೆಯೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, 50ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ನಗರದ ಪ್ರಮುಖ ಉದ್ಯಮಿಗಳ ಮನೆ, ಕಂಪನಿ, ಚಾರ್ಟರ್ಡ್ ಅಕೌಂಟೆಂಟ್ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿಗಳು ಮತ್ತು ಗುತ್ತಿಗೆದಾರರ ಮನೆಗಳು ಮತ್ತು ಕಚೇರಿಗಳ ಮೇಲೆ 300ಕ್ಕೂ ಹೆಚ್ಚು ಆದಾಯ ತೆರಿಗೆ ಅಧಿಕಾರಿಗಳು 120 ವಾಹನಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಕೊಡಿಗೇಹಳ್ಳಿ ಸಹಕಾರ ನಗರದಲ್ಲಿರುವ ರಾಹುಲ್ ಎಂಟರ್ ಪ್ರೈಸಸ್ ಮೇಲೂ ಐಟಿ ದಾಳಿ ನಡೆದಿದೆ. ರಾಹುಲ್ ಎಂಟರ್‌ಪ್ರೈಸಸ್ ಸಿಮೆಂಟ್, ಸ್ಟೀಲ್ ಡೀಲರ್ ಕಚೇರಿಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಹೆಗಡೆ ನಗರದಲ್ಲಿರುವ ಎನ್.ಆರ್. ರಾಯಲ್ ಅಪಾರ್ಟ್‌ಮೆಂಟ್ ನಲ್ಲಿರುವ ಚಾರ್ಟೆಡ್ ಅಕೌಂಟೆಂಟ್ ಅಮಲಾ ಮನೆ ಮೇಲೆ IT ರೇಡ್ ನಡೆದಿದೆ. 10ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ದಾಳಿ, ಪರಿಶೀಲನೆ ನಡೆದಿದೆ ಎನ್ನಲಾಗಿದೆ.
Key words: IT -Shock -Bangalore – morning-officer
ENGLISH SUMMARY…
IT raids at more than 50 places in Bengaluru
Bengaluru, October 7, 2021 (www.justkannada.in): Sleuths attached to the Income Tax Department conducted a surprise raid on more than 50 places in Bengaluru early in the morning today.
Houses of several major industrialists, companies, offices of the chartered accountants were raided today early in the morning. More than 300 officials of the Income Tax department conducted the raid on the houses of several industrialists and contractors and their offices in 120 vehicles.
Rahul Enterprises in Sahakaranagar, Kodigehalli, is also raided. The IT officials are verifying the documents at the Rahul Enterprises cement, steel dealer’s offices. Similarly, a team of 10 officials raided the apartment of Chartered Accountant Amala, located in N.R. Royal Apartment, in Hegdenagar.
Keywords: IT raid/ shock to Bengalureans/ officials