ಬೆಂಗಳೂರು,ಜನವರಿ,03,2021(www.justkannada.in) : ಮುಂದಿನ ನಾಲ್ಕು ತಿಂಗಳುಗಳ ಬಳಿಕ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಪಕ್ಷದ ಚಿಹ್ನೆಯಡಿ ನಡೆಯಲಿದ್ದು, ಬಿಜೆಪಿ ಶೇ 80ರಷ್ಟು ಸ್ಥಾನಗಳನ್ನು ಗೆಲ್ಲಬೇಕಿದೆ. ಜನಸೇವಕ್ ಸಮಾವೇಶಗಳನ್ನು ಜನವರಿ 11, 12, 13ರಂದು ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮೈಸೂರಿನಲ್ಲಿ ಮುಖ್ಯಮಂತ್ರಿಗಳಿಂದ ಸಮಾವೇಶದ ಉದ್ಘಾಟನೆ ನೆರವೇರಿಸಲಾಗುವುದು. ಗ್ರಾಮ ಸ್ವರಾಜ್ಯ ಸಮಾವೇಶಗಳು, ಕುಟುಂಬ ಸಮ್ಮಿಲನದಂಥ ಕಾರ್ಯಕ್ರಮಗಳಿಂದ ಪಕ್ಷದ 44 ಸಾವಿರ ಕಾರ್ಯಕರ್ತರು ಇದೀಗ ಪಂಚಾಯತ್ ಸದಸ್ಯರಾಗಿದ್ದಾರೆ ಎಂದರು.
3,500 ಜನರು ಅಧ್ಯಕ್ಷರಾಗುವ ಕನಸು ನನಸಾಗಲಿದೆ. ಶೇ.60 ಪಂಚಾಯತ್ಗಳಲ್ಲಿ ಬಿಜೆಪಿ ಕಾರ್ಯಕರ್ತರು ಗೆಲುವು ಸಾಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಕ್ರಮಗಳು ಜನರನ್ನು ನೇರವಾಗಿ ತಲುಪಿವೆ. ಕೋವಿಡ್ ಮತ್ತು ನೆರೆಯ ಸವಾಲಿನ ಮಧ್ಯೆ ಸಮರ್ಥ ಆಡಳಿತ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯವೂ ನಮ್ಮ ಗೆಲುವಿಗೆ ಪೂರಕವಾಗಿದೆ ಎಂದು ವಿವರಿಸಿದರು.
ಶಿವಮೊಗ್ಗವು ಸಂಘಟನೆಗೆ ಪ್ರೇರಣೆ ಕೊಟ್ಟ ಜಿಲ್ಲೆ. ಹಿಂದೂ ವಿಚಾರಧಾರೆಗೆ ಬೆಲೆ ಕೊಟ್ಟ ಜಿಲ್ಲೆ ಇದು ಎಂದು ಅವರು ಮೆಚ್ಚುಗೆ ಸೂಚಿಸಿದರು.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಭೂತಪೂರ್ವ ಜಯದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ಸನ್ಮಾನಿಸಲಾಯಿತು.
ರಾಷ್ಟಿಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್, ರಾಷ್ಟಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಗಣಿ ಮತ್ತು ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಷಿ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ಕುಮಾರ್, ಡಿಸಿಎಂ ಗೋವಿಂದ ಕಾರಜೋಳ, ಲಕ್ಷ್ಮಣ್ ಸವದಿ, ರಾಜ್ಯ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಕಂದಾಯ ಸಚಿವ ಆರ್.ಅಶೋಕ್, ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಪಕ್ಷದ ಹಿರಿಯ ಮುಖಂಡ ಡಿ.ಎಚ್.ಶಂಕರಮೂರ್ತಿ ಇತರರು ಉಪಸ್ಥಿತರಿದ್ದರು.
key words : January 11, 12, 13-Janasevac-Conference-BJP President-Nalin Kumar Katil …!