ನವದೆಹಲಿ,ಜನವರಿ,27,2025 (www.justkannada.in): ಐಸಿಸಿ, 2024 ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಭಾಜನರಾಗಿದ್ದಾರೆ.
2024 ರಲ್ಲಿ ಜಸ್ಪ್ರೀತ್ ಬುಮ್ರಾ ಅತ್ಯತ್ತಮ ಪ್ರದರ್ಶನ ನೀಡಿದ್ದು ಇದೀಗ ವರ್ಷದ ಟೆಸ್ಟ್ ಕ್ರಿಕೆಟಿಗರಾಗಿ ಆಯ್ಕೆಯಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.
ಜಸ್ಪ್ರೀತ್ ಬುಮ್ರಾ ಅವರು 2024 ರಲ್ಲಿ ಒಟ್ಟು 13 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ಅವಧಿಯಲ್ಲಿ ಅವರು 14.92 ಸರಾಸರಿಯಲ್ಲಿ 71 ವಿಕೆಟ್ ಪಡೆದರು. ಈ ಮೂಲಕ ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಎನಿಸಿಕೊಂಡಿದ್ದರು.
ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಯನ್ನು ಗೆದ್ದ 6ನೇ ಭಾರತೀಯ ಕ್ರಿಕೆಟರ್ ಜಸ್ಪ್ರೀತ್ ಬುಮ್ರಾ. ಇದಕ್ಕೂ ಮುನ್ನ ರಾಹುಲ್ ದ್ರಾವಿಡ್, ಗೌತಮ್ ಗಂಭೀರ್, ವೀರೇಂದ್ರ ಸೆಹ್ವಾಗ್, ರವಿಚಂದ್ರನ್ ಅಶ್ವಿನ್ ಮತ್ತು ವಿರಾಟ್ ಕೊಹ್ಲಿ ಕೂಡ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಆದರೆ ಈ ಐವರು ಆಟಗಾರರು ಬ್ಯಾಟ್ಸ್‌ಮನ್ ಗಳಾಗಿದ್ದು, ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗರಾಗಿ ಆಯ್ಕೆಯಾದ ಭಾರತದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಜಸ್ಪ್ರೀತ್ ಬುಮ್ರಾ ಪಾತ್ರರಾಗಿದ್ದಾರೆ.
Key words: Jasprit Bumrah, ICC, 2024 Test Cricketer of the Year, award