ಧಾರವಾಡ,ಮಾರ್ಚ್,28,2025 (www.justkannada.in): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಿರುವುದಕ್ಕೆ ಕಿಡಿಕಾರಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಉಚ್ಚಾಟನೆ ಆದೇಶ ಹಿಂಪಡೆಯದಿದ್ರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಬಸನಗೌಡ ಪಾಟೀಲ್ ಯತ್ನಾಳ್ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಚಾಟನೆ ಮಾಡುವಂತೆ ಮಾಡಿವೆ. ಬಿಜೆಪಿ ಪಕ್ಷದ ವರಿಷ್ಠರು ಯತ್ನಾಳ್ ಅವರ ಉಚ್ಚಾಟನೆ ಆದೇಶವನ್ನು ವಾಪಸ್ ಪಡೆಯದೇ ಹೋದರೆ ಲಿಂಗಾಯತ ಸಮುದಾಯದ ಎಲ್ಲ ಶಾಸಕರು ಬಿಜೆಪಿ ಬಿಟ್ಟು ಹೊರಬರಬೇಕು ಎಂದು ತಿಳಿಸಿದರು.
ನಮ್ಮ ಸಮಾಜಕ್ಕೆ ನಾನು ಕರೆ ಕೊಡುತ್ತೇನೆ. ಬೆಳಗಾವಿಯಲ್ಲಿ ಸಭೆ ಕರೆಯುತ್ತೇನೆ. ಮುಂದೆ ಒಂದು ದಿನ ರಾಜ್ಯದಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಏಪ್ರಿಲ್ 13 ರಂದು ಬೃಹತ ಸಮಾವೇಶ ಮೂಲಕ ಬಿಜೆಪಿ ವರಿಷ್ಠರಿಗೆ ತಕ್ಕ ಉತ್ತರ ಕೊಡುತ್ತೇವೆ ಎಂದರು.
Key words: MLA, Yatnal, Expansio, Jaya Mritunjaya Swamiji