ಬೆಂಗಳೂರು,ಡಿಸೆಂಬರ್,9,2020(www.justkannada.in): ಕಾಂಗ್ರೆಸ್ ಚಿಹ್ನೆಗೆ ವ್ಯಾಲ್ಯೂ ಇಲ್ಲ. ಹೀಗಾಗಿ ಕಾಂಗ್ರೆಸ್ ಶಾಲು ಬಿಟ್ಟು ಹಸಿರು ಶಾಲು ಹಿಡಿದು ಬಂದಿದ್ದಾರೆ ಎಂದು ವ್ಯಂಗ್ಯವಾಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಕಾಂಗ್ರೆಸ್ ಪಕ್ಷದ ಶಾಲಿನ ಬಗ್ಗೆ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಉತ್ತರಿಸಿದ ಡಿ.ಕೆ ಶಿವಕುಮಾರ್, ‘ಪಾಪ ಏನು ಮಾಡ್ತೀರಿ. ಜೆಡಿಎಸ್ ನಾಯಕರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿದ್ದು, ಇದೇ ಶಾಲು. ಕುಮಾರಸ್ವಾಮಿ ಅವರನ್ನು ಈ ರಾಜ್ಯದ ಮುಖ್ಯಮಂತ್ರಿಯಾಗಿ ಮಾಡಿದ್ದು ಕೂಡ ಇದೇ ಶಾಲು. ಈಗ ಅವರು ಅದೇ ಶಾಲಿನ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಎಂದರೆ, ಇದರ ಬಗ್ಗೆ ರಾಜ್ಯದ ಜನತೆ ತೀರ್ಮಾನ ಮಾಡಲಿ’ ಎಂದು ಟಾಂಗ್ ನೀಡಿದರು.
ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ರಾಜ್ಯ ಸರ್ಕಾರ ಫ್ಲೈಓವರ್ ಕಾಮಗಾರಿಗೆ ಬಳಸಿರುವುದು ಈ ವರ್ಗದ ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕಿರುವ ಬದ್ಧತೆಯನ್ನು ತೋರುತ್ತದೆ. ಇದು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿ ಸರ್ಕಾರವಾಗಿದ್ದು, ಅಧಿಕಾರದಲ್ಲಿ ಮುಂದುವರಿಯುವ ನೈತಿಕ್ತೆ ಇಲ್ಲ. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಸಚಿವ ಶ್ರೀರಾಮುಲು ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿಯದ್ದು ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ವಿರೋಧಿ ಸರ್ಕಾರ…
ಇದೇ ವೇಳೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಡಿ.ಕೆ ಶಿವಕುಮಾರ್, ‘ಇಡಿ ಭಾರತದ ಇತಿಹಾಸದಲ್ಲಿ ಬೆಳಗಾವಿ ಅಧಿವೇಶನದಲ್ಲಿ ನಮ್ಮ ಸರ್ಕಾರ ಸಂವಿಧಾನಾತ್ಮಕವಾಗಿ ಕಾನೂನು ಜಾರಿಗೆ ತಂದಿದ್ದೆವು. 30 ಸಾವಿರ ಕೋಟಿ ಹಣವನ್ನು ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟು ಆ ಹಣವನ್ನು ಅವರಿಗಾಗಿಯೇ ಖರ್ಚು ಮಾಡಲು ನಾವು ಕಾನೂನು ರೂಪಿಸಿದ್ದೆವು.
ಕಳೆದ ಬಜೆಟ್ ನಲ್ಲಿ ಇದು 17 ಸಾವಿರ ಕೋಟಿಗೆ ಇಳಿದಿತ್ತು. ಆರ್ಥಿಕ ಸಂಪನ್ಮೂಲ ಕೊರತೆ ಪರಿಸ್ಥಿತಿ ಅರಿತು ನಾವು ಈ ಬಗ್ಗೆ ಮಾತನಾಡಿರಲಿಲ್ಲ. ಈಗ 10 ಸಾವಿರ ಕೋಟಿಗೆ ಬಂದಿದ್ದು, ಜತೆಗೆ ಆ ಹಣವನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಿದೆ. ಇದು ಬಿಜೆಪಿಯು ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರ ವಿಚಾರವಗಿ ಬದ್ಧತೆ ಹೊಂದಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಟೀಕಿಸಿದರು.
ಡಿಸಿಎಂ ಗೋವಿಂದ ಕಾರಜೋಳ ಮತ್ತು ಸಚಿವ ಶ್ರೀರಾಮುಲು ರಾಜೀನಾಮೆ ನೀಡಲಿ…
ಕಾರಜೋಳ ಅವರು ಹಾಗೂ ಶ್ರೀರಾಮುಲು ಅವರಿಗೆ ಸ್ವಾಭಿಮಾನ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಕಾರಜೋಳ ಅವರು ಉಪಮುಖ್ಯಮಂತ್ರಿಯಾಗಿ ಅವರ ಧ್ವನಿ ಕಳೆದುಕೊಂಡಿದ್ದಾರೆ. ಬಿಜೆಪಿಯ ದಲಿತ ವಿರೋಧಿ ನೀತಿಯನ್ನು ಇವರಿಂದ ತಡೆಯಲು ಸಾಧ್ಯವಾಗಿಲ್ಲ. ಈ ಇಬ್ಬರ ಸಮ್ಮತಿ ಇಲ್ಲದೆ ಈ ಇಲಾಖೆ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಇದು ದಲಿತ ವಿರೋಧಿ ಸರ್ಕಾರವಾಗಿದ್ದು, ಇದು ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ ಎಂದು ಡಿ.ಕೆ ಶಿವಕುಮಾರ್ ಗುಡುಗಿದರು.
ಕಲ್ಯಾಣ ಕರ್ನಾಟಕದ ನಿರ್ಲಕ್ಷ್ಯ:
ಈ ಭಾಗದಲ್ಲಿ ಕಾಂಗ್ರೆಸ್ ಶಾಸಕರು ಹೆಚ್ಚಾಗಿದ್ದಾರೆ. ಹೀಗಾಗಿ ಕಲ್ಯಾಣ ಕರ್ನಾಟಕಕ್ಕೆ ನಿಗದಿ ಮಾಡಿರುವ 1500 ಕೋಟಿ ಹಣ ಬಿಡುಗಡೆ ಮಾಡಿದರೆ ನಮ್ಮ ಶಾಸಕರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಬಿಜೆಪಿ ಸರ್ಕಾರ ಈ ಭಾಗವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಆರೋಪಿಸಿದರು.
‘ಸಿದ್ದರಾಮಯ್ಯನವರು ಯಡಿಯೂರಪ್ಪನವರನ್ನು ಭೇಟಿ ಮಾಡಿರುವ ಬಗ್ಗೆ ಅವರನ್ನೇ ಕೇಳಬೇಕು. ನನಗೆ ಗೊತ್ತಿಲ್ಲದ ವಿಚಾರದ ಬಗ್ಗೆ ನಾನೇನು ಹೇಳಲಿ?’ ಎಂದರು.
English summary…
“It is our shawl that made JDS leaders CM and PM – DKS
Bengaluru, Dec. 09, 2020 (www.justkannada.in): Following former CM H.D. Kumaraswamy’s remarks, “there is no value for Congress symbol, and hence they are carrying green shawls in place of congress shawl,” KPCC President D.K. Shivakumar has given his reaction.
Speaking to the press persons at the KPCC office in queen’s road today, he said, “what to do?, it is the green shawls that made JDS leaders Chief Minister and Prime Minister. But now they are speaking cheaply about it. Let the people of the state decided about it.”
Condemning the State Government for using funds that are meant for the development of Dalits, for construction of the flyover, he said it shows the BJP government’s commitment towards the downtrodden. He demanded the resignation of Deputy Chief Minister Govind Karajola and Minister immediately.
Keywords: Green shawl/ D.K. Shivakumar/ JDS/ HDK
Key words: JDS- leaders – Prime Minister – Chief Minister-tong- kpcc –president-DK Shivakumar