ಚಾಮರಾಜನಗರ,ಡಿಸೆಂಬರ್,7,2024 (www.justkannada.in): ಸಿಎಂ ಸಿದ್ದರಾಮಯ್ಯ ಅವರನ್ನ ಹನೂರು ಕ್ಷೇತ್ರದ ಜೆಡಿಎಸ್ ಶಾಸಕ ಮಂಜುನಾಥ್ ಅವರು ಹಾಡಿ ಹೊಗಳಿದ್ದಾರೆ.
ಚಾಮರಾಜನಗರ ಜಿಲ್ಲೆ ಪ್ರವಾಸ ಕೈಗೊಂಡಿದ್ದ ಸಿಎಂ ಸಿದ್ದರಾಮಯ್ಯ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಹನೂರು ಜೆಡಿಎಸ್ ಶಾಸಕ ಮಂಜುನಾಥ್, ಸಿದ್ದರಾಮಯ್ಯ ಜನಪ್ರಿಯ ಸಿಎಂ ಭಾಗ್ಯಗಳ ಸರದಾರ. ಎಲ್ಲಾ ಭಾಗ್ಯಗಳು ಬರ್ತಿವೆ ಅಲ್ವಾ? ಹನೂರು ಜನಪ್ರಿಯ ಸಿಎಂ ನಮ್ಮ ಕ್ಷೇತ್ರಕ್ಕೆ ಬಂದಿದ್ದಾರ ಮಕ್ಕಳ ಭವಿಷ್ಯ ಬಗ್ಗೆ ಸಿಎಂ ಒಳ್ಳೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಸರ್ಕಾರಿ ಶಾಲೆಗಳಲ್ಲಿ ಪೌಷ್ಠಿಕ ಆಹಾರ ದೊರೆಯುತ್ತಿದೆ ಎಂದರು.
ಸಿದ್ದರಾಮಯ್ಯ ಸರ್ಕಾರಿ ಶಾಲೆಯಲ್ಲಿ ಓದಿ 2 ಬಾರಿ ಸಿಎಂ ಆಗಿದ್ದಾರೆ. ಹನೂರು ವಿದಾನಸಭಾ ಕ್ಷೇತ್ರದಲ್ಲೂ ಕೆಲ ಸಮಸ್ಯೆಗಳಿವೆ. ಸಮಸ್ಯೆ ಬಗೆ ಹರಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಸಿಎಂ ಬಳಿ ಮಂಜುನಾಥ್ ಮನವಿ ಮಾಡಿದರು.
Key words: Popular CM, JDS MLA, praises, Siddaramaiah