ಗೋಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ…

ಬೆಂಗಳೂರು,ಡಿಸೆಂಬರ್,15,2020(www.justkannada.in):  ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ  ಗೋಹತ್ಯೆ ನಿಷೇಧ  ಕಾಯ್ದೆಗೆ  ಜೆಡಿಎಸ್ ವಿರೋಧ ವ್ಯಕ್ತಪಡಿಸಿದೆ.I didn't knew CM BSY will think so cheaply - KPCC President D.K. Shivakumar

ಈ ಕುರಿತು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಮಾಧ್ಯಮ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ಪಕ್ಷವು ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.

2010 ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ನಾವು ವಿರೋಧಿಸಿದ್ದೆವು. ಈಗಲೂ ವಿರೋಧ ಮಾಡುತ್ತೇವೆ.  ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋ-ಕಲ್ಲೋಲ ಮಾಡಲು ಹೊರಟಿದೆ.jds-opposition-go-killing-prohibition-act

2010 ರಲ್ಲಿ ಮಸೂದೆ ಮಂಡನೆಗೆ ಹೊರಟಾಗ ನಾವು ರಾಜ್ಯಪಾಲರು ಹಾಗೂ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದೇವು. ಬಳಿಕ ಬಿಜೆಪಿ ಸರ್ಕಾರ ಮಸೂದೆಯನ್ನು ಹಿಂಪಡೆದಿತ್ತು. ಆದರೆ ಇದೀಗ ಮತ್ತೆ ಗೋಹತ್ಯೆ ನಿಷೇಧ ಮಸೂದೆ ಮಂಡನೆಗೆ ಮುಂದಾಗಿದೆ. ಇದಕ್ಕೆ ಜೆಡಿಎಸ್ ವಿರೋಧವಿದೆ ಎಂದು ಹೆಚ್.ಡಿ ದೇವೇಗೌಡರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: JDS -Opposition – Go killing Prohibition Act