ಜಾರ್ಖಂಡ್,ಡಿ,23,2019(www.justkannada.in):ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಮಹಾಮೈತ್ರಿಕೂಟ ಮುನ್ನಡೆ ಸಾಧಿಸಿದೆ.
ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಜಾರ್ಖಾಂಡ್ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ನಡುವೆ ಬಿಜೆಪಿ ಹಿನ್ನಡೆ ಅನುಭವಿಸಿದೆ. ಒಟ್ಟು 81 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 43 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಬಿಜೆಪಿ 24 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಇನ್ನು ಎಜೆಎಸ್ ಯು 4 ಸ್ಥಾನ ಮತ್ತು ಇತರೇ 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಈ ಮೂಲಕ ಕಾಂಗ್ರೆಸ್-ಜೆಎಂಎಂ-ಆರ್ ಜೆಡಿ ಮೈತ್ರಿಕೂಟವು ಬಹುಮತ ಸಾಧಿಸಿದ್ದು, ಸರಳ ಬಹುಮತದೊಂದಿಗೆ ಆಡಳಿತ ಚುಕ್ಕಾಣಿ ಹಿಡಿಯುವ ಸಾಧ್ಯತೆ ಕಂಡುಬಂದಿದೆ. ಅಧಿಕಾರ ಗದ್ದುಗೆ ಹಿಡಿಯಲು ಮ್ಯಾಜಿಕ್ ನಂಬರ್ 41 ಆಗಿದೆ. ಕಾಂಗ್ರೆಸ್ 43 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
Key words: Jharkhand- Assembly -Election Results-congress- alliance-simple majority.