ಬೆಂಗಳೂರು,ಜೂ,26,2019(www.justkannada.in): ಜಿಂದಾಲ್ ಕಂಪನಿಗೆ ಸರ್ಕಾರಿ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಚಿವ ಸಂಪುಟ ಉಪ ಸಮಿತಿ ರಚಿಸಿ ಆದೇಶ ಹೊರಡಿಸಿದೆ.
ಜಿಂದಾಲ್ ಗೆ ಸರ್ಕಾರಿ ಭೂಮಿ ಪರಭಾರೆ ವಿವಾದ ಬಗೆಹರಿಸಲು ಮುಂದಾಗಿರುವ ರಾಜ್ಯಸರ್ಕಾರ ಇದೀಗ ಗೃಹ ಸಚಿವ ಎಂ.ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಿದೆ. ಸಮಿತಿಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣೇಭೈರೇಗೌಡ, ಸಚಿವ ಬಂಡಪ್ಪ ಕಾಶಂಪುರ ನಾಲ್ವರು ಸದಸ್ಯರಾಗಿ ನೇಮಿಸಲಾಗಿದೆ.
ಜಿಂದಾಲ್ ಕಂಪನಿಗೆ ಸರ್ಕಾರಿ ಭೂಮಿ ಪರಭಾರೆಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಟೀಕೆ ವ್ಯಕ್ತಪಡಿಸಿದೆ. ಅಲ್ಲದೆ ರಾಜ್ಯ ಸಮ್ಮಿಶ್ರ ಸರ್ಕಾರದ ಕೆಲ ಮುಖಂಡರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.
Key words: Jindal Company- government- land-Cabinet Subcommittee- State Government.