ಬಳ್ಳಾರಿ,ಮೇ,1,2021(www.justkannada.in): ಜಿಂದಾಲ್ ಗೆ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಧಾರ ನೋಡಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
ಜಿಂದಾಲ್ ಗೆ 3667 ಎಕರೆ ಭೂಮಿ ಪರಭಾರೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಚಿವ ಆನಂದ್ ಸಿಂಗ್ ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆನಂದ್ ಸಿಂಗ್, ಜಿಂದಾಲ್ ಗೆ ಭೂಮಿ ಪರಭಾರೆ ಮಾಡದಂತೆ ಸಿಎಂ ಬಿಎಸ್ ವೈಗೆ ಕರೆ ಮಾಡಿ ಮನವಿ ಮಾಡಿದ್ದೇನೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಇದನ್ನ ವಿರೋಧ ಮಾಡುತ್ತೇನೆ. ಕಾಂಗ್ರೆಸ್ ನವರು ಈ ವಿಚಾರದಲ್ಲಿ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಹಾಗೆಯೇ ಈ ವಿಚಾರವಾಗಿ ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಭೂಮಿ ಪರಭಾರೆ ಮಾಡಿದರೇ ಪಕ್ಷಕ್ಕೆ ಹಿನ್ನಡೆಯಾಗುತ್ತದೆ. ಈಗ ಸರ್ಕಾರದ ನಿರ್ಧಾರ ನೋಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.
Key words: Jindal – land- issue-Government Decision -Minister -Anand Singh.