ಉತ್ತರ ಪ್ರದೇಶ,ಸೆಪ್ಟಂಬರ್,12,2022(www.justkannada.in): ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಲಿಂಗದ ದರ್ಶನ, ಪೂಜೆ ಸಲ್ಲಿಸಲು ಅವಕಾಶ ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಉತ್ತರ ಪ್ರದೇಶದ ವಾರಾಣಸಿ ಜಿಲ್ಲಾ ಕೋರ್ಟ್ ಸಮ್ಮತಿ ಸೂಚಿಸಿದೆ.
ಜ್ಞಾನವಾಪಿ ಮಸೀದಿ ಪ್ರಕರಣದ ಕುರಿತು ಮುಸ್ಲಿಂ ಅರ್ಜಿದಾರರ ಆಕ್ಷೇಪಣೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಐವರು ಹಿಂದೂ ಮಹಿಳೆಯರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಯೋಗ್ಯವೆಂದು ಉತ್ತರ ಪ್ರದೇಶದ ವಾರಾಣಸಿ ಜಿಲ್ಲಾ ಕೋರ್ಟ್ ಆದೇಶ ನೀಡಿದೆ.
ಸೆಪ್ಟಂಬರ್ 22 ರಂಧು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ ಎಂದು ಕೋರ್ಟ್ ಹೇಳಿದೆ. ಇನ್ನು ವಾರಾಣಸಿ ಜಿಲ್ಲಾ ಕೋರ್ಟ್ ಆದೇಶವನ್ನ ಪ್ರಶ್ನಿಸಿ ಮುಸ್ಲೀಂ ಪರ ವಕೀಲರು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Jnanavapi- Masjid –case-Court -agrees -hear -petition -Hindus