ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ’ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ

ನವದೆಹಲಿ,ಫೆಬ್ರವರಿ,19,2025 (www.justkannada.in): ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕಾರ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ  ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಕುಮಾರ್ ಅವರನ್ನು ನೇಮಕ ಮಾಡಿದ್ದು ಇಂದು 26ನೇ  ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು.

ಹೊಸ ಕಾನೂನಿನ ಅಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಕುಮಾರ್ ಆಗಿದ್ದು, ಅವರ ಅಧಿಕಾರಾವಧಿ 2029 ರ ಜನವರಿ 26 ರವರೆಗೆ ಇರಲಿದೆ. ಹಾಲಿ ಮುಖ್ಯ ಚುನಾವಣಾ ಆಯುಕ್ತರಾಗಿರುವ ರಾಜೀವ್ ಕುಮಾರ್ ಅವರು ನಿವೃತ್ತರಾಗಿದ್ದಾರೆ.

Key words: Jnanesh Kumar, charge, new, Chief Election Commissioner