ಉದ್ಯೋಗ ಸೃಷ್ಟಿ, ಕೃಷಿಗೆ ಹೆಚ್ಚು ಆದ್ಯತೆ: ಬಜೆಟ್ ನಲ್ಲಿ ಯಾವುದೇ ತಾರತಮ್ಯವಿಲ್ಲ-ಆರ್.ಅಶೋಕ್

ಬೆಂಗಳೂರು,ಜುಲೈ,23,2024 (www.justkannada.in): ಬಜೆಟ್​​ ನಲ್ಲಿ ಉದ್ಯೋಗ ಸೃಷ್ಟಿ, ಕೃಷಿಗೆ ಹೆಚ್ಚು ಆದ್ಯತೆ ನೀಡಲಾಗಿದ್ದು ಯಾವುದೇ ತಾರತಮ್ಯ ಮಾಡಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

ಕೇಂದ್ರ ಬಜೆಟ್ ಕುರಿತು ಇಂದು ಮಾತನಾಡಿದ ಆರ್.ಅಶೋಕ್, ಬಜೆಟ್ ನಲ್ಲಿ ಬಿಹಾರ ಮತ್ತು ಆಂಧ್ರಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ. ಆದರೆ ಬೇರೆ ರಾಜ್ಯಗಳನ್ನೂ ಕಡೆಗಣಿಸಿಲ್ಲ.  ಯಾವುದೇ ತಾರತಮ್ಯ ಮಾಡದೆ ಬಜೆಟ್​ನಲ್ಲಿ ಆದ್ಯತೆ ನೀಡಿದ್ದಾರೆ. ದೇಶದ ರೈತರ ಪರ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ. ಮೀಸಲು ಇಡಲಾಗಿದೆ ಎಂದರು.

ತೆರಿಗೆ ಪಾವತಿ ಮಿತಿಯನ್ನು ಏರಿಕೆ ಮಾಡಲಾಗಿದ್ದು,  ಇದು ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ. ಅಲ್ಲದೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಐದು ವರ್ಷಕ್ಕೆ ವಿಸ್ತರಣೆ ಮಾಡಲಾಗಿದ್ದು,  ಆ ಮೂಲಕ ಬಡವರಿಗೆ ಅನುಕೂಲ ಆಗಲಿದೆ. ಒಂದು ಕೋಟಿ ಮನೆಗಳಿಗೆ ಉಚಿತ ಸೋಲಾರ್ ವಿದ್ಯುತ್ ಕೊಡಲಾಗುತ್ತಿದೆ. ಕೈಗಾರಿಕಾ ತೆರಿಗೆ ಕಡಿಮೆ ಮಾಡಲಾಗಿದೆ ಎಂದು ಆರ್.ಅಶೋಕ್ ತಿಳಿಸಿದರು.

Key words: Job creation, agriculture, priority, budget, R.Ashok