ಮೈಸೂರು,ಜನವರಿ,5,2021(www.justkannada.in): ಮೈಸೂರು ಜಿಲ್ಲೆಯ ವಿದ್ಯಾವಂತ ಯುವಕ ಯುವತಿಯರಿಗಾಗಿ ಜನವರಿ 16 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಕೇಂದ್ರ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ಜನವರಿ 16 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಎನ್. ಆರ್. ಮೊಹಲ್ಲಾದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಚೇರಿಯ ಆವರಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ನಡೆಯಲಿದೆ.
ಉದ್ಯೋಗ ಮೇಳ ಕುರಿತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಉದ್ಯೋಗ ಮೇಳದಲ್ಲಿ ರಾಜ್ಯದ ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದ್ದು, ಎಸ್ ಎಸ್ ಎಲ್ ಸಿ ಉತ್ತೀರ್ಣ ಅಥವಾ ಅನುತ್ತೀರ್ಣ, ಪಿಯುಸಿ, ಜೆಓಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್ ಅಥವಾ ಯಾವುದೇ ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಸಿಗಲಿದೆ.
ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪ್ರಕ್ರಿಯೆ ಆದೇಶ ನೀಡಲಾಗುತ್ತದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಬಯೋಡಾಟಾದೊಂದಿಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ
ಕೊರೋನಾದಿಂದ ಕೆಲಸವಿಲ್ಲದೇ ಕಂಗಾಲಾಗಿದ್ದ ವಿದ್ಯಾವಂತ ಯುವಕ ಯುವತಿಯರಿಗೆ ಇದೀಗ ಉದ್ಯೋಗ ಮೇಳ ಭರವಸೆ ಹುಟ್ಟಿಸಿದೆ.
English summary…
Job Mela in Mysuru on Jan. 16
Mysuru, Jan. 05, 2021 (www.justkannada.in): A job mela has been organised in Mysuru for the benefit of educated boys and girls of the District.
This job mela is organised under the National Professional Service Programme, of Govt. of India and will be held at the District Employment Exchange Office, in the Government Industrial Training Institute office, in N.R. Mohalla, from 10.00 am to 4.00 pm.
Prestigious companies are taking part in this job mela. Candidates who have passed or failed in SSLC, PUC, JOC, ITI, Diploma, Engineering or any degree can participate and avail job opportunities.
Keywords: Job Mela/ Mysuru/ N.R. Mohalla/ Employment Exchange centre
Key words: Job fair – Mysore -Jan. 16-sslc-puc- any degree- educated