ಬೆಂಗಳೂರು,ಜು,14,2019(www.justkannada.in): ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಬಿಜೆಪಿಗೆ ಸೇರಿಸಿಕೊಳ್ಳಲು ನಮಗೇನು ತಲೆ ಕೆಟ್ಟಿದೆಯಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರಶ್ನಿಸಿದರು.
ಇಂದು ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿಗೆ ಬರುತ್ತಾರೆಂಬ ಸುದ್ದಿ ಹರಡಿದೆ. ಅವರನ್ನ ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಅವರು ಬಿಜೆಪಿಗೆ ಬರುವುದಾಗಿ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.
ಕಾಂಗ್ರೆಸ್ನ 9, ಜೆಡಿಎಸ್ನ 3 ಅತೃಪ್ತ ಶಾಸಕರ ರಾಜೀನಾಮೆ ಬಳಿಕ ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ಎದುರಾಗಿದೆ. ಈ ನಡುವೆ ಇದೇ ಸಮಯವನ್ನ ಉಪಯೋಗಿಸಿಕೊಂಡು ಸರ್ಕಾರ ರಚನೆಗೆ ಬಿಜೆಪಿ ಯತ್ನಿಸುತ್ತಿದ್ದರೇ ಇತ್ತ ಮೈತ್ರಿ ಪಕ್ಷದ ನಾಯಕರು ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ಶುಕ್ರವಾರದಿಂದ ಪ್ರಾರಂಭವಾಗಿರುವ ಅಧಿವೇಶನದಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಹುಮತ ಸಾಭೀತುಪಡಿಸುವುದಾಗಿ ಘೋಷಿಸಿದ್ದಾರೆ.
Key words: join –BJP-congress-MLA-BS Yeddyurappa