ಬೆಂಗಳೂರು,ಡಿಸೆಂಬರ್,28,2020(www.justkannada.in): ಹಿರಿಯ ಪತ್ರಕರ್ತ ಎಲ್.ಅಶ್ವಥ್ ನಾರಾಯಣ ಅವರ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಯಿಂದ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರ ಬರದಿರುವ ಶಿವಾನಂದ ತಗಡೂರು, ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ಪತ್ರಕರ್ತ ಎಲ್.ಅಶ್ವಥ್ ನಾರಾಯಣ ಅವರು ಖಿನ್ನತೆಗೊಳಗಾಗಿ ಆತ್ಮಹತ್ಯೆ ಯತ್ನ ಮಾಡಿರುವುದು ಆತಂಕಕಾರಿ ಮತ್ತು ನೋವಿನ ಸಂಗತಿ. ಸ್ಥಳೀಯ ಪೊಲೀಸ್ ಪ್ರಕರಣದಲ್ಲಿ ಸಿಲುಕಿಸಲು ಮತ್ತು ಆಗಿಂದಾಗ್ಗೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡುವ ಪ್ರಯತ್ನ ನಡೆಸಿರುವುದು ಖಂಡನೀಯ. ಪತ್ರಕರ್ತನ ಮಾನಸಿಕ ಸ್ಥಿಮಿತ ತಗ್ಗಿಸುವ ಮಟ್ಟಿಗೆ ಪೊಲೀಸ್ ಒತ್ತಡ ಮತ್ತು ಕಿರುಕುಳ ಮಾಡುವುದು ಅತ್ಯಂತ ಖಂಡನೀಯ ಎಂದಿದ್ದಾರೆ.
ಹಾಗೆಯೇ ಹಿರಿಯ ಪೊಲೀಸ್ ಅಧಿಕಾರಿಯಿಂದ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಕೂಡಲೇ, ಬಟ್ಲಹಳ್ಳಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಪಾಪಣ್ಣ ಅವರನ್ನು ಅಮಾನತು ಮಾಡಬೇಕು ಎಂದು ಶಿವಾನಂದ ತಗಡೂರು ಒತ್ತಾಯಿಸಿದ್ದಾರೆ.
Key words: journalist- attempting- suicide-Shivananda Tagadur- – impartial investigation – action