ಆಕ್ಷೇಪಾರ್ಹ ಹೇಳಿಕೆ ; ನ್ಯಾಯಾಧೀಶರು ವಿಷಾದ.

 objectionable statement; The judge regretted.

 

ಬೆಂಗಳೂರು, sep.21,2024: (www.justkannada.in news) ಪ್ರಕರಣವೊಂದರ ವಿಚಾರಣೆ ವೇಳೆ ಹೈಕೋರ್ಟ್‌ ನ್ಯಾಯಾಧೀಶರೊಬ್ಬರು ಲಘುವಾಗಿ ಮಾತನಾಡಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಆ ನ್ಯಾಯಾಧೀಶರು ವಿಷಾದ ವ್ಯಕ್ತಪಡಿಸಿ ಘಟನೆ ನಡೆದಿದೆ.

‘ನನ್ನ ಆಕ್ಷೇಪಾರ್ಹ ಹೇಳಿಕೆಗಳು ಯಾರಿಗಾದರೂ ನೋವುಂಟು ಮಾಡಿದ್ದರೆ ಅದಕ್ಕಾಗಿ ಪ್ರಾಮಾಣಿಕ ವಿಷಾದ ವ್ಯಕ್ತಪಡಿಸುತ್ತೇನೆ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ತಿಳಿಸಿದ್ದಾರೆ.

ನ್ಯಾಯಮೂರ್ತಿ ಶ್ರೀಶಾನಂದ ಅವರು ಪ್ರಕರಣಗಳ ವಿಚಾರಣೆ  ವೇಳೆ, ‘ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನದಂತಿದೆ’ ಎಂದು ಬಣ್ಣಿಸಿದ್ದರು ಹಾಗೂ ಮಹಿಳಾ ವಕೀಲೆಯೊಬ್ಬರಿಗೆ, ‘ನಿಮ್ಮ ಪ್ರತಿವಾದಿ ಯಾವ ಬಣ್ಣದ ಒಳ ಉಡುಪು ಧರಿಸಿದ್ದಾರೆ ಎಂಬುದನ್ನೂ ನೀವು ಹೇಳಬಲ್ಲಷ್ಟು ಅವರನ್ನು ಅರಿತಿದ್ದೀರಿ’ ಎಂದು ವ್ಯಂಗ್ಯವಾಡಿದ್ದರು.

ಇದು ಯೂಟ್ಯೂಬ್‌ ನಲ್ಲಿ ನೇರ ಪ್ರಸಾರಗೊಂಡು, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿತ್ತು. ಜಡ್ಜ್‌ ನಡೆ ಬಗ್ಗೆ ಅಸಮಧಾನ ವ್ಯಕ್ತವಾಗಿತ್ತು. ಸುಪ್ರೀಂಕೋರ್ಟ್‌ ಸಹ ಮಧ್ಯಪ್ರವೇಶಿಸಿ ಈ ಬಗ್ಗೆ ವಿವರಣೆ ಕೇಳಿತ್ತು.

ಈ ಹಿನ್ನೆಲೆಯಲ್ಲಿ,  ಬೆಂಗಳೂರು ನಗರದ ಹೈಕೋರ್ಟ್‌ ನ 23ನೇ ಕೋರ್ಟ್ ಹಾಲ್‌ನಲ್ಲಿ ಶನಿವಾರ ಮಧ್ಯಾಹ್ನ,  ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಮತ್ತು ವಕೀಲರ ಸಮ್ಮುಖದಲ್ಲಿ ಮುಕ್ತ ನ್ಯಾಯಾಲಯದಲ್ಲಿ ಈ ಬಗ್ಗೆ ವಿವರಿಸಿದ ಅವರು ವಿಷಾದ ವ್ಯಕ್ತಪಡಿಸಿದರು.

ಈ ವೇಳೆ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ, ಖಜಾಂಚಿ ಎಂ.ಟಿ.ಹರೀಶ್ ಮತ್ತು ಹೈಕೋರ್ಟ್ ಕಾರ್ಯಕಾರಿ ಸಮಿತಿ ಸದಸ್ಯರು, ಹಿರಿಯ ವಕೀಲ ಅಶೋಕ ಹಾರನಹಳ್ಳಿ ಹಾಗೂ ವಕೀಲರು ಕೋರ್ಟ್ ಹಾಲ್‌ನಲ್ಲಿ ಹಾಜರಿದ್ದರು.

key words:  objectionable statement, judge regretted.