ಬೆಂಗಳೂರು, ಡಿಸೆಂಬರ್ 6,2024 (www.justkannada.in): ಬಳ್ಳಾರಿ ಬಾಣಂತಿಯರ ಸಾವು ಪ್ರಕರಣದಲ್ಲಿ ಸರ್ಕಾರದ ನಿರ್ಲಕ್ಷ್ಯ ಎದ್ದು ತೋರುತ್ತಿದ್ದು, ಪ್ರಕರಣ ಕುರಿತು ನ್ಯಾಯಾಂಗ ತನಿಖೆಯಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಒತ್ತಾಯಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಬಿವೈ ವಿಜಯೇಂದ್ರ, ಬ್ಲಾಕ್ ಲಿಸ್ಟ್ ಆಗಿರುವ ಕಂಪನಿಯಿಂದ ಔಷಧ ತಗೆದುಕೊಳ್ಳಲಾಗಿದೆ. ಸರ್ಕಾರ ಈ ವಿಚಾರದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.
ಇದುವರೆಗೆ ಆರೋಗ್ಯ ಸಚಿವರಾಗಲಿ, ವೈದ್ಯಕೀಯ ಶಿಕ್ಷಣ ಸಚಿವರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಘಟನಾ ಸ್ಥಳಕ್ಕೆ ಹೋಗದಿರುವುದು ಖಂಡನೀಯ ಎಂದು ಕಿಡಿಕಾರಿದ ಬಿವೈ ವಿಜಯೇಂದ್ರ, ಬೆಳಗಾವಿ ಅಧಿವೇಶನದಲ್ಲಿ ಬಳ್ಳಾರಿ ಬಾಣಂತಿಯರ ಸಾವಿನ ಪ್ರಕರಣ, ರೈತರ ಬೆಳೆ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬೇಕಿದೆ. ನಾನು ಅದರತ್ತ ಮಾತ್ರ ಗಮನ ಹರಿಸುತ್ತೇನೆ ಎಂದಿದ್ದಾರೆ.
ಇದೇ ವೇಳೆ ಜನಕಲ್ಯಾಣ ಸಮಾವೇಶದ ಬಗ್ಗೆ ಟೀಕಿಸಿದ ಬಿವೈ ವಿಜಯೇಂದ್ರ, ಜನರು ಅನೇಕ ಸಮಸ್ಯೆಗಳನ್ನು ಎದುರಿಸತ್ತಿದ್ದಾರೆ. ಆದರೆ ಇವರು ಜನಕಲ್ಯಾಣ ಹೆಸರಲ್ಲಿ ಸಮಾವೇಶ ಮಾಡಿಕೊಂಡು ಕುಳಿತಿದ್ದಾರೆ ಎಂದು ಕಿಡಿಕಾರಿದರು.
Key words: judicial inquiry, death, Bellary, Banantis, BY Vijayendra