ಬೆಂಗಳೂರು,ಜುಲೈ,10,2023(www.justkannada.in): ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಶಿಕ್ಷೆ ತೀರ್ಪು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ಧ ಮೇಲ್ಮನವಿ ಅರ್ಜಿ ವಜಾ ಮತ್ತು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜುಲೈ 12ರಂದು ದೇಶಾದ್ಯಂತ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆಗೆ ಮುಂದಾಗಿದ್ದಾರೆ.
ಜುಲೈ 12 ರಂದು ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಕಾಂಗ್ರೆಸ್ ನಾಯಕರು ದೇಶಾದ್ಯಂತ ಮೌನ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್ ನಾಯಕರಿಂದ ಮೌನ ಪ್ರತಿಭಟನೆ ನಡೆಯಲಿದೆ.
ಗಾಂಧಿ ಪ್ರತಿಮೆ ಅಥವಾ ಸ್ವಾತಂತ್ರ್ಯ ಹೋರಾಟಗಾರ ಪ್ರತಿಮೆ ಬಳಿ ‘ಕೈ’ ನಾಯಕರು ಧರಣಿ ನಡೆಸಲಿದ್ದಾರೆ. ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುವುದು ಹೇಗೆ? ಎನ್ನುವ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ನ್ಯಾಯಲಯ, ರಾಹುಲ್ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
Key words: July 12- silent protest -Congress -across -country.