ಬೆಂಗಳೂರು,ಜೂನ್,9,2023(www.justkannada.in): ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಆಯ್ಕೆಯಾಗಿರುವ ಎಲ್ಲಾ ಶಾಸಕರು ಜೂನ್ 30ರೊಳಗೆ ಆಸ್ತಿವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಸೂಚನೆ ನೀಡಿದ್ದಾರೆ.
ಆದೇಶ ನೀಡಿ 15 ದಿನ ಕಳೆದರೂ ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಹೀಗಾಗಿ ಲೋಕಾಯುಕ್ತ ನ್ಯಾ.ಬಿ.ಎಸ್ ಪಾಟೀಲ್ ಅವರು ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಿದ್ದೇವೆಂದು ಸುಮ್ಮನಿರುವಂತಿಲ್ಲ. ಪುನರ್ ಆಯ್ಕೆಯಾದ ಶಾಸಕರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಮೊದಲ ಬಾರಿ ಆಯ್ಕೆಯಾದ ಶಾಸಕರು ಕೂಡ ಆಸ್ತಿ ವಿವರ ಸಲ್ಲಿಸಬೇಕು. ಒಂದು ವೇಳೆ ಜೂ.30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳುವುದಾಗಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಈ ಬಾರಿ ದಾಖಲೆಗಳ ಸಮೇತ ಮತ್ತೆ ಆಸ್ತಿ ವಿವರ ಸಲ್ಲಿಸಬೇಕು. ಕಳೆದ ಬಾರಿ ಶಾಸಕರು ಸರಿಯಾದ ಮಾದರಿಯಲ್ಲಿ ಆಸ್ತಿ ವಿವರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಸಮಸ್ಯೆ ಆಗಬಾರದೆಂದು ಶಾಸಕರ ಕಡ್ಡಾಯ ಆಸ್ತಿ ವಿವರ ಪಡೆಯಲು ಲೋಕಾಯುಕ್ತ ಸೆಕ್ರೆಟರಿಗೆ ಸೂಚಿಸಿದ್ದಾರೆ.
Key words: Justice -Lokayukta – deadline – all -MLAs – submit –property- details