ಬೆಂಗಳೂರು,ಡಿಸೆಂಬರ್,28,2020(www.justkannada.in) : ಈ ನೆಲದ ನಂಬಿಕೆಗಳಿಗೆ ಅವಮಾನ ಮಾಡುವುದರಿಂದ ಏನು ಸಾಧಿಸುತ್ತಾರೆ, ನೆಲಕ್ಕೆ ಅವಮಾನ ಮಾಡುವುದನ್ನೇ ಕೆಲವರು ಜಾತ್ಯಾತೀತತೆ ಎಂದು ನಂಬಿದ್ದಾರೆ ಎಂದು ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಪರೋಕ್ಷವಾಗಿ ಶಿಕ್ಷಣ ಸಚಿವ ಕಿಡಿ ಕಾರಿದ್ದು, ‘ಅಣ್ಣಾ, ಇವತ್ತು ಹನುಮ ಜಯಂತಿ’ ಎಂದು ನೆನಪಿಸಿದ ಗ್ರಾಮಸ್ಥನಿಗೆ, ‘ಯಾವ ಜಯಂತಿ? ಹನುಮ ಹುಟ್ಟಿದ ತಾರೀಖು ನಿನಗೆ ಗೊತ್ತಾ? ಏನೂ ಆಗಲ್ಲ ತಿನ್ನು. ಹನುಮ ಹುಟ್ಟಿದ ದಿನ ಗೊತ್ತಿದ್ದರೆ ಮಾಡಬೇಕು. ಗೊತ್ತಿಲ್ಲ ಅಲ್ವಾ? ಚಿಕನ್ ತಿನ್ನು ಎಂದು ತಮ್ಮದೇ ಧಾಟಿಯಲ್ಲಿ ಛೇಡಿಸಿದರಂತೆ ಈ ನಾಯಕರು.
ಇದು ಅಗತ್ಯವಿತ್ತೇ? ಈ ನೆಲದ ನಂಬಿಕೆಗಳಿಗೆ ಅವಮಾನ ಮಾಡುವುದೇ ಜಾತ್ಯಾತೀತತೆ ಎಂದು ನಂಬಿದ್ದಾರೆ ಈ ರೀತಿಯ ನಾಯಕರುಗಳು. ಇವರಂತೆಯೆ ಮತ್ತೊಬ್ಬ ನಾಯಕರು ಈ ಹಿಂದೆ ರಾಮನ birth certificate ಎಲ್ಲಿ ಎಂದು ಕೇಳಿದ್ದು ನೆನಪಿಗೆ ಬರುತ್ತಿದೆ. ಅದಕ್ಕಾಗಿಯೇ ಈ ನೆಲದ ನಂಬಿಕೆಗಳ ಬಗ್ಗೆ ಗೌರವ ಇರುವ ಅಸಂಖ್ಯಾತ ಜನತೆಯಿಂದ ದೂರ ಸರಿಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಭಾನುವಾರ ಗ್ರಾಮಪಂಚಾಯತ್ ಮತದಾನ ಮಾಡಿದ ಬಳಿಕ ಮೈಸೂರಿನ ಆಪ್ತರ ಮನೆಯಲ್ಲಿ ಬಾಡೂಟ ಸವಿಯುತ್ತಿದ್ದ ವೇಳೆ ಸಿದ್ದರಾಮಯ್ಯ ಅವರಿಗೆ ಬೆಂಬಲಿಗನೊಬ್ಬ ಇಂದು ಹನುಮ ಜಯಂತಿ ಎಂದು ನೆನಪಿಸಿದ್ದ. ಇದಕ್ಕೆ ಎಂದಿನಂತೆ ತಮ್ಮ ಶೈಲಿಯಲ್ಲಿ ಸಹಜವಾಗಿ ಉತ್ತರಿಸಿದ್ದ ಸಿದ್ದರಾಮಯ್ಯ, ಹನುಮ ಹುಟ್ಟಿದ ದಿನಾಂಕ ನಿನಗೆ ಗೊತ್ತಾ? ಏನಾಗಲ್ಲ ಚಿಕನ್ ತಿನ್ನು ಎಂದು ಉತ್ತರಿಸಿದ್ದಾರೆ.
key words : Just-insult-ground-Some-believe-secularism-Minister-S.Suresh Kumar