ಬೆಂಗಳೂರು, ಮೇ 14, 2020 : (www.justkannada.in news) : ದೇಶದಲ್ಲಿ ಕೋವಿಡ್ 19 ಭೀತಿ ಇನ್ನು ಇರುವ ಕಾರಣ ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಬೇಡ ಎಂದು ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ಮುಖಂಡ ಸಿ ಎಂ.ಇಬ್ರಾಹಿಂ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಕೇಳಿರುವ ಹಿನ್ನಲೆಯಲ್ಲಿ ಸಚಿವ ಈಶ್ವರಪ್ಪ ಈ ಸಲಹೆ ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ , ಪ್ರತಿಕ್ರಿಯೆ ನೀಡಿ. ಈಗಾಗಲೇ ಇಬ್ರಾಹಿಂ ಮತ್ತು ಜಮೀರ್ ಅಹ್ಮದ್ ರವರು ತಬಲೀಕಿಗಳಿಗೆ ಸಪೊರ್ಟ ಮಾಡಿ ಏನಾಗುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಅದಕ್ಕೆ ನಾನು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಮುಖಂಡರ ಮನವಿ ತಿರಸ್ಕರಿಸಬೇಕೆಂದು ವಿನಂತಿಸುತ್ತೇನೆ ಎಂದರು.
ಜತೆಗೆ ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿ, ರಾಜ್ಯದಲ್ಲಿ ಹಿಂದೆ ಆಗಿರುವ ಅನಾಹುತಗಳು ಮತ್ತೆ ಮರುಕಳಿಸಬಾರದು ಎಂದು ತಿಳಿಸಿದರು.
key words : k.seshwarappa-ramjan-no-permission-for-mass-prayer-karnataka-bjp