ಸಚಿವ ಕೆ.ವೆಂಕಟೇಶ್ ಮನೆಗೆ ಮುತ್ತಿಗೆಗೆ ಯತ್ನ: ಬಿಜೆಪಿ ಕಾರ್ಯಕರ್ತರ ಬಂಧನ

ಮೈಸೂರು,ಜನವರಿ,14, 2025 (www.justkannada.in): ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಮನೆಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದು ಈ ವೇಳೆ ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಶಾರದಾದೇವಿ ನಗರದಲ್ಲಿರುವ  ಸಚಿವ ವೆಂಕಟೇಶ್ ನಿವಾಸಕ್ಕೆ ಮೈಸೂರು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಸಗಣಿ ಎರಚಿ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದರು. ಸಚಿವ ವೆಂಕಟೇಶ್ ಮನೆ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಸ್ಥಳದಲ್ಲಿ ನೂರಾರು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು.

Key words:  Minister, K. Venkatesh, house, BJP workers, mysore