ಬೆಂಗಳೂರು, ಮೇ 20, 2021 (www.justkannada.in): ದಕ್ಷಿಣ ಭಾರತದ ನಟಿ ಕಾಜಲ್ ಅಗರ್ವಾಲ್ ಶೀಘ್ರವೇಚಿತ್ರರಂಗತೊರೆಯುವಸೂಚನೆನೀಡಿದ್ದಾರೆ.
ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ ಎಂದಿದ್ದಾರೆ ಕಾಜಲ್.
ನಾನು ಇಂದು ಈ ಸ್ಥಾನದಲ್ಲಿ ಇರುವುದಕ್ಕೆ ಕಾರಣ ನನ್ನ ಪತಿ ಹಾಗೂ ನನ್ನ ಕುಟುಂಬ. ಪತಿಯ ಅನುಮತಿ ಪಡೆದೇ ನಟನೆ ಮುಂದುವರಿಸುತ್ತಿದ್ದೇನೆ. ಇಲ್ಲದಿದ್ದರೆ ಇಲ್ಲ ಎಂದಿದ್ದಾರೆ.
ಅಂದಹಾಗೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಉದ್ಯಮಿ ಗೌತಮ್ ಜತೆ ಕಾಜಲ್ ಮದುವೆ ಆಗಿದ್ದರು. ಮದುವೆ ನಂತರವೂ ಅವರು ಶೂಟಿಂಗ್ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ.