ಮಧ್ಯಪ್ರದೇಶ,ಮಾ,20,2020(www.justkannada.in): ಮಧ್ಯಪ್ರದೇಶದಲ್ಲಿ ರಾಜಕೀಯ ಅನಿಶ್ಚಿತತೆ ಉಂಟಾಗಿದ್ದು ಈ ಹಿನ್ನೆಲೆ, ಮುಖ್ಯಮಂತ್ರಿ ಸ್ಥಾನಕ್ಕೆ ಕಮಲನಾಥ್ ರಾಜೀನಾಮೆ ಘೋಷಿಸಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಮಧ್ಯಾಹ್ನ ರಾಜ್ಯಪಾಲರನ್ನ ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಬಹುಮತ ಸಾಬೀತಿಗೂ ಮೊದಲೇ ಕಮಲ್ ನಾಥ್ ರಾಜೀನಾಮೆ ಘೋಷಿಸಿದ್ದಾರೆ.
ಈ ಮೂಲಕ ಮಧ್ಯಪ್ರದೇಶದ ರಾಜಕೀಯ ಬಿಕ್ಕಟ್ಟು ಕೊನೆಯ ಹಂತಕ್ಕೆ ಬಂದು ನಿಂತಿದೆ. ಬಿಜೆಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಇಂದು ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತುಪಡಿಸುವಂತೆ ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಗೆ ಸೂಚನೆ ನೀಡಿತ್ತು. ಇನ್ನು ಕಾಂಗ್ರೆಸ್ ನಲ್ಲಿ ಬಂಡಾಯವೆದ್ದು ಕಾಂಗ್ರೆಸ್ ಶಾಸಕರು ಸಲ್ಲಿಸಿರುವ ರಾಜೀನಾಮೆಯನ್ನ ಸ್ಪೀಕರ್ ಅಂಗೀಕರಿಸಿದ್ದಾರೆ ಎನ್ನಲಾಗಿದೆ.
ಮಧ್ಯಪ್ರದೇಶ ಸದನದ ಬಲ 206 ಕ್ಕೆ ಇಳಿದಿದ್ದು, ಕಮಲ್ ನಾಥ್ ನೇತೃತ್ವದ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಬಹುಮತಕ್ಕೆ 104 ಶಾಸಕರ ಬೆಂಬಲ ಬೇಕಿದೆ. ವಿರೋಧ ಪಕ್ಷವಾಗಿರುವ ಬಿಜೆಪಿ 107 ಶಾಸಕರನ್ನು ಹೊಂದಿದೆ.
Key words: Kamal Nath- announces – resignation – CM – Madhya Pradesh.