ರಾಮನಗರ,ನ,1,2019(www.justkannada.in): ಇಂದು 64ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಹಿನ್ನೆಲೆ ನಗರದ ಕೆಎಸ್ಆರ್ ಟಿಸಿ ಬಸ್ ಘಟಕದ ಸಿಬ್ಬಂದಿ ತಮ್ಮ ವಾಹನಗಳಿಗೆ ಅಲಂಕರಿಸುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಿಸಿದರು.
ರಾಮನಗರ-ಮಾಗಡಿ ನಡುವೆ ಸಂಚರಿಸುವ ವಾಹನಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹೂವುಗಳದ ಅಲಂಕರಿಸಿ, ಧ್ವನಿವರ್ಧಕ ಅಳವಡಿಸಿ, ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಸಿಹಿ ಹಂಚುವ ಮೂಲಕ ಕನ್ನಡ ರಾಜ್ಯೋತ್ಸವನ್ನು ವಿಶಿಷ್ಟವಾಗಿ ಆಚರಿಸಿದರು.
ವಾಹನಗಳ ಒಳಭಾಗದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಮತ್ತು ಕನ್ನಡ ಪರ ಹೋರಾಟಗಾರರ ಫೋಟೋಗಳನ್ನು ಅಂಟಿಸುವ ಮೂಲಕ ಕನ್ನಡದ ಕಂಪನ್ನು ಸಾರ್ವಜನಿಕ ಪ್ರಯಾಣಿಕರಿಗೆ ತಿಳಿಸುವ ಪ್ರಯತ್ನ ಮಾಡಿದ್ದಾರೆ.
ನಿರ್ವಾಹಕರಾದ ಜೆ.ರವಿ, ನಾಗರಾಜು, ಚಾಲಕರಾದ ಶರಣಪ್ಪ ಕಲ್ಗುಡಿ, ಗಿರೀಶ್, ಅವರು ವಿಶಿಷ್ಟ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಸಾರ್ವಜನಿಕ ಪ್ರಯಾಣಿಕರು ಮತ್ತು ಸಂಸ್ಥೆಯ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
Key words: Kannada Rajyotsava- celebration – Ramanagara –KSRTC-staff